ನವದೆಹಲಿ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರ 3 ಗಗನಯಾತ್ರಿಗಳನ್ನು ಹೊತ್ತ ಡ್ರ್ಯಾಗನ್ ಕ್ಯಾಪ್ಸುಲ್ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಯಶಸ್ವಿಯಾಗಿ ತಲುಪಿದೆ. 28 ಗಂಟೆಗಳ ಪ್ರಯಾಣದ ನಂತರ, ಎಲ್ಲಾ ಗಗನಯಾತ್ರಿಗಳು ISS ತಲುಪಿದ್ದಾರೆ.
ಇದಕ್ಕೂ ಮೊದಲು ಅವರ ಆಗಮನದ ಸಮಯ ಸಂಜೆ 4:30 ಆಗಿತ್ತು. ಹಾಗಾಗಿ, ಇದು ಭಾರತೀಯರಿಗೆ ಹೆಮ್ಮೆಯ ಕ್ಷಣ. ಈ ಯೋಜನೆಯಲ್ಲಿ ಭಾರತದ ಶುಭಾಂಶು ಶುಕ್ಲಾ, ಅಮೆರಿಕಾದ ಪೆಗ್ಗಿ ವಿಟ್ಲನ್, ಪೋಲೆಂಡ್ನ ನವೋಖ್ ಉಝ್ ನಾಸ್ತಿ, ಹಂಗೇರಿಯ ಟಿಬರ್ ಕಪ್ಪು ಫ್ಲೋರಿ 14 ದಿನಗಳ ಕಾಲ ಐಎಸ್ಎಸ್ನಲ್ಲೇ ಇರಲಿದ್ದಾರೆ.
ಅಲ್ಲಿ 60 ರೀತಿಯ ವಿವಿಧ ಪ್ರಯೋಗಗಳನ್ನ ಗಗನಯಾತ್ರಿಗಳು ನಡೆಸಲಿದ್ದಾರೆ. ಮುಖ್ಯವಾಗಿ ಬಾಹ್ಯಾಕಾಶದ ಗುರುತ್ವಾಕರ್ಷಣೆ, ಲೈಫ್, ಬಯೋಲಾಜಿಕಲ್, ಭೂಮಿ ವೀಕ್ಷಣೆ, ಮೆಟಿರಿಯಲ್ ಸೈನ್ಸ್ ಸೇರಿ 60 ರೀತಿಯ ವಿವಿಧ ಪ್ರಯೋಗ ಮಾಡಲಿದ್ದಾರೆ. ಸೂಕ್ಷ್ಮ ಗುರುತ್ವಾಕರ್ಷಣೆಯಲ್ಲಿ ವೈಜ್ಞಾನಿಕ ಸಂಶೋಧನೆ ನಡೆಸಲು ಈ ಸಿಬ್ಬಂದಿ ISSನಲ್ಲಿ 14 ದಿನಗಳನ್ನು ಕಳೆಯಲಿದ್ದಾರೆ.