ಬೆಂಗಳೂರು: ಸಿದ್ದರಾಮಯ್ಯ ಮುಡಾ ಪ್ರಕರಣದಲ್ಲಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕೇಂದ್ರ ಬೃಹತ್ ಕೈಗಾರಿಕಾ ಇಲ್ಲ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಏನೆಲ್ಲಾ ನಡೆದಿದೆ ಎಂಬುದು ಹಾದಿ ಬೀದಿಯಲ್ಲಿ ಚರ್ಚೆ ನಡೆಯುತ್ತಿದೆ. ರಾಜ್ಯಪಾಲರಿಗೆ ದೂರು ನೀಡಿದವರೇ ಇ.ಡಿ. ಗೂ ದೂರು ಕೊಟ್ಟಿದ್ದಾರೆ.
Advertisement
ಇದರಲ್ಲಿ ಕೇಂದ್ರವನ್ನು ದೂರಿದರೆ ಏನು ಉಪಯೋಗ? ಸಿದ್ದರಾಮಯ್ಯ ನಮ್ಮ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ. ಪರಿಹಾರ ಎಂದು 14 ನಿವೇಶನ ಪಡೆದಿರುವುದೇ ಕಾನೂನು ಬಾಹಿರ. ಸಿದ್ದರಾಮಯ್ಯ ಈ ಪ್ರಕರಣದಲ್ಲಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಕಾನೂನು ಎಲ್ಲರಿಗೂ ಒಂದೇ. ತಪ್ಪು ಮಾಡಿದರೆ ಶಿಕ್ಷೆ ಅನುಭವಿಸಬೇಕು ಎಂದು ಕಿಡಿಕಾರಿದ್ದಾರೆ.