ಸಿದ್ದರಾಮಯ್ಯಗೆ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆಯಲು ಧೈರ್ಯ ಇಲ್ಲ: ಛಲವಾದಿ ನಾರಾಯಣಸ್ವಾಮಿ!

0
Spread the love

ಬೆಂಗಳೂರು:- ಸಿದ್ದರಾಮಯ್ಯಗೆ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆಯಲು ಧೈರ್ಯ ಇಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

Advertisement

ಈ ಸಂಬಂಧ ಮಾತನಾಡಿದ ಅವರು, ಸಚಿನ್ ಬರೆದಿಟ್ಟ 7 ಪುಟಗಳ ಡೆತ್ ನೋಟಿನಲ್ಲಿ 2-3 ಬಾರಿ ಪ್ರಿಯಾಂಕ್ ಖರ್ಗೆಯವರ ಹೆಸರು ಪ್ರಸ್ತಾಪವಾಗಿದೆ. ಜೊತೆಗೆ ಎಫ್‌ಎಸ್‌ಎಲ್ ವರದಿಯಲ್ಲೂ ಡೆತ್ ನೋಟ್ ಅಸಲಿ ಎಂದು ದೃಢಪಟ್ಟಿದೆ. ದಾಖಲೆ ಕೊಡಿ ಎಂದರೆ ಇನ್ನೇನು ದಾಖಲೆ ಬೇಕು ನಿಮಗೆ ಎಂದು ಪ್ರಶ್ನಿಸಿದರು.

ದಾಖಲೆ ಇಲ್ಲದ ಕಾರಣ ಸಚಿವ ಸ್ಥಾನದಿಂದ ಕೈಬಿಡುವ ವಿಚಾರ ಉದ್ಭವಿಸುವುದಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಮುಖ್ಯಮಂತ್ರಿಗಳೇ ಇದು ನಮಗೆ ಮೊದಲೇ ಗೊತ್ತಿದೆ. ನಿಮಗೆ ಧೈರ್ಯ ಇಲ್ಲ ಎಂಬುದು ನಮಗೆ ಗೊತ್ತಿದೆ ಎಂದು ಟೀಕಿಸಿದರು.

ಆ ಸಚಿವರ ತಂದೆಯವರು ಎಐಸಿಸಿ ಅಧ್ಯಕ್ಷರು. ನೀವು ಇದಕ್ಕೆ ಕೈ ಹಾಕಿದರೆ ಅವರು ನಿಮ್ಮ ಬುಡಕ್ಕೆ ಕೈ ಹಾಕುವ ಭಯ ನಿಮಗಿದೆ. ನೀವು ಕುರ್ಚಿಗೆ ಅಂಟಿ ಕುಳಿತವರು. ಇಷ್ಟೊತ್ತಿಗೆ ನೀವು ಅವರನ್ನು ವಜಾ ಮಾಡಬೇಕಿತ್ತು, ರಾಜೀನಾಮೆ ಪಡೆಯಬೇಕಾಗಿತ್ತು. ಬೇರೆ ಸರ್ಕಾರವಿದ್ದಾಗ ಸ್ವಲ್ಪ ಬಂದರೂ ಬೀದಿಗಿಳಿದು ಬೆಂಕಿ ಹಚ್ಚುತ್ತೀರಲ್ಲವೇ? ಈಗ ನಿಮ್ಮನ್ನು ತಡೆದೋರ‍್ಯಾರು ಎಂದು ಕಿಡಿಕಾರಿದರು.


Spread the love

LEAVE A REPLY

Please enter your comment!
Please enter your name here