ಬೆಂಗಳೂರು: ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಇದರ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರ ಕೇವಲ ಮುಸ್ಲಿಮರ ಓಲೈಕೆ ಮಾಡುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,
ಇವತ್ತಿನ ಬಿಜೆಪಿ ಪ್ರತಿಭಟನೆಗೆ ವಿಜಯೇಂದ್ರ ಯಾಕೆ ಅಂತಾ ಲಿಂಬಾವಳಿರನ್ನು ಕೇಳಿ ಗೊತ್ತಾಗುತ್ತದೆ. ಹಿಂದೂ ಸಮಾಜದ ಎಲ್ಲಾ ವರ್ಗದವರ ಸಂಘಟನೆ ಮಾಡುತ್ತೇವೆ. ಸಿದ್ದರಾಮಯ್ಯ ಸರ್ಕಾರ ಕೇವಲ ಮುಸ್ಲಿಮರ ಓಲೈಕೆ ಮಾಡುತ್ತಿದೆ. ರಾಯಣ್ಣ ಬ್ರಿಗೇಡ್ಗೆ ಆರ್ಸಿಬಿ ಅಂತಾ ಏನೂ ಹೆಸರು ಇಟ್ಟಿಲ್ಲ. ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಅಂತಾ ನಾವು ಸೀಮಿತಗೊಳಿಸಿಲ್ಲ. ಬಿಜೆಪಿಯಲ್ಲಿ ಎಷ್ಟು ಬಣ ಇವೆ ಅಂತಾ ಸಿದ್ದರಾಮಯ್ಯಗೆ ಬೇಕಾಗಿಲ್ಲ. ನಿಮ್ಮಲ್ಲಿ ಎಷ್ಟು ಬಣಗಳಿವೆ ಅಂತಾ ನೋಡಿಕೊಳ್ಳಿ ಎಂದು ಹೇಳಿದ್ದಾರೆ.