ಬೆಂಗಳೂರು:- ಮುಸ್ಲಿಮರ ಸಂಖ್ಯೆ ಹೆಚ್ಚಾಗಲಿ ಎಂದು ಸಿದ್ದರಾಮಯ್ಯ ಕುತಂತ್ರ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
Advertisement
ಹಿಂದೂಗಳು ಎರಡೇ ಮಕ್ಕಳನ್ನು ಮಾಡಿಕೊಳ್ಳಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಆರ್ ಅಶೋಕ್, ಸಾಬ್ರುಗೂ ಎರಡು ಮಕ್ಕಳು ಮಾಡಿಕೊಳ್ಳಿ ಅಂತ ಸಿಎಂ ಸಿದ್ದರಾಮಯ್ಯ ಹೇಳಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ಇದನ್ನು ಹೋಗಿ ಸಾಬರಿಗೆ ಹೇಳುತ್ತಾರಾ? ಹಿಂದೂಗಳ ಸಂಖ್ಯೆ ಕಡಿಮೆ ಆಗಲಿ, ಮುಸ್ಲಿಮರ ಸಂಖ್ಯೆ ಹೆಚ್ಚಾಗಲಿ ಎಂದು ಸಿದ್ದರಾಮಯ್ಯ ಕುತಂತ್ರ ಮಾಡಿದ್ದಾರೆ. ಸಿಎಂ ಓಲೈಕೆ ಮಾಡುವುದನ್ನು ಬಿಡಬೇಕು. ಇದರಿಂದಲೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಮೊನ್ನೆ ಸ್ವಾಮೀಜಿಗಳು ಹಿಂದೂಗಳು ಜಾಸ್ತಿ ಮಕ್ಕಳು ಮಾಡಿಕೊಳ್ಳಿ ಎಂದು ಹೇಳಿದ್ದಕ್ಕೆ ಕೌಂಟರ್ ಆಗಿ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಆರೋಪ ಮಾಡಿದರು.