ಜಾತಿ ಜನಗಣತಿಯನ್ನು ಸಿದ್ದರಾಮಯ್ಯ ನವರು ಬೊಂಬೆ ಆಟದಂತೆ ಮಾಡಿಕೊಂಡಿದ್ದಾರೆ: ವಿಜಯೇಂದ್ರ

0
Spread the love

ಚಿಕ್ಕಮಗಳೂರು: ಜಾತಿ ಜನಗಣತಿಯನ್ನು ಸಿದ್ದರಾಮಯ್ಯ ನವರು ಬೊಂಬೆ ಆಟದಂತೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುರ್ಚಿ ಅಲುಗಾಡಿದಾಗ,

Advertisement

ಸರ್ಕಾರಕ್ಕೆ ಗಂಡಾಂತರ ಬಂದಾಗ ಜಾತಿ ಜನಗಣತಿ ಬೆದರು ಬೊಂಬೆಯಾಗುತ್ತೆ. ದೇಶದಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಭ್ರಷ್ಟ ಸರ್ಕಾರ ಎಂದು ಪ್ರಚಾರ ಆಗಿದೆ, ವಾಲ್ಮೀಕಿ, ಮೂಡಾ ಹಗರಣ ಸೇರಿ ಕುರ್ಚಿ ಅಲುಗಾಡಿದಾಗ ಜನಗಣತಿ ವಿಚಾರ ಮುನ್ನೆಲೆಗೆ ಬರುತ್ತೆ ಎಂದರು.

ಇನ್ನೂ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರಡ್ಡಿಯವರೇ ಸರ್ಟಿಫಿಕೇಟ್‌ ಕೊಟ್ಟಿದ್ದಾರೆ. ಅಧಿಕಾರಕ್ಕಾಗಿ ಶೇ. 40 ಕಮಿಷನ್‌ ಸರ್ಕಾರವೆಂದು ಬಿಜೆಪಿ ಮೇಲೆ ಅಪಪ್ರಚಾರ ಮಾಡಿದ್ರು ಆದ್ರೆ ಈಗ ಇಡೀ ದೇಶದಲ್ಲಿ ಶೇ.80 ಭ್ರಷ್ಟಾಚಾರದ ಸರ್ಕಾರ ಇದ್ರೆ ಅದು ಕರ್ನಾಟಕ ಸರ್ಕಾರ ಮಾತ್ರ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.


Spread the love

LEAVE A REPLY

Please enter your comment!
Please enter your name here