ಹುಬ್ಬಳ್ಳಿ: ಬಿಜೆಪಿಗೆ ಸರ್ಕಾರ ರಚಿಸಲು ಕೆಲ ಶಾಸಕರನ್ನು ಸಿದ್ದರಾಮಯ್ಯನವರೇ ಕಳುಹಿಸಿದ್ದರು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಸರ್ಕಾರ ಮಾಡಲು ಸಿದ್ದರಾಮಯ್ಯರಿಗೆ ನೈತಿಕತೆ ಇರಲಿಲ್ಲ. ಹೀಗಾಗಿ ಕೆಲ ಶಾಸಕರನ್ನು ಸಿದ್ದರಾಮಯ್ಯನವರೆ ಬಿಜೆಪಿಗೆ ಕಳುಹಿಸಿದ್ದರು, ಹೀಗಾಗಿ ನಾವು ಸರ್ಕಾರ ರಚನೆ ಮಾಡಬೇಕಾಗಿ ಬಂತು ಎಂದು ಹೇಳಿದರು.
ಇನ್ನೂ ಈ ಬಾರಿ ಕಾಂಗ್ರೆಸ್ ಸರ್ಕಾರಕ್ಕೆ ಬಹುಮತ ಬಂದಿದೆ ಅದಕ್ಕೆ ಅವರು ಅಧಿಕಾರದಲ್ಲಿದ್ದಾರೆ. ನಾವು ವಿರೋಧ ಪಕ್ಷವಾಗಿ ಕೆಲಸ ಮಾಡೋಣ ಎಂದು ನಿರ್ಧರಿಸಿದ್ದೇವೆ. ಕಳೆದ ಬಾರಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯಬಾರದು ಎಂಬ ಕಾರಣಕ್ಕೆ ಸಿದ್ದರಾಮಯ್ಯನವರೇ ಶಾಸಕರನ್ನು ಕಳುಹಿಸಿದರು ಎಂದು ಹೇಳಿದರು.



