ಬೆಂಗಳೂರು: ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿರಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಶಾಸಕ ಆರ್.ವಿ ದೇಶಪಾಂಡೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ವೇಳೆ ನನ್ನ ಮತ್ತು ಸಿದ್ದರಾಮಯ್ಯ ನಡುವೆ 40 ವರ್ಷಗಳ ಅನುಬಂಧವಿದೆ. ಸಿದ್ದರಾಮಯ್ಯ ಅವರಾಗಲಿ, ಅವರ ಪತ್ನಿಯಾಗಲಿ ಮುಡಾ ಸೈಟ್ ಕೇಳಿಲ್ಲ. ಈಗ ಇದರ ಬಗ್ಗೆ ಚರ್ಚೆ ನಡೆಯುತ್ತಿದೆ. ಇಷ್ಟು ವರ್ಷಗಳಿಂದ ಇಲ್ಲದ ಆರೋಪಗಳು ಈಗ ಯಾಕೆ? ಸಿದ್ದರಾಮಯ್ಯ ಮತ್ತು ಅವರ ಪತ್ನಿ ಯಾವುದೇ ಕಾನೂನು ಉಲ್ಲಂಘನೆ ಮಾಡಿಲ್ಲ.
ಅವರು ಸಿಎಂ ಆಗಿರುವುದನ್ನು ಸಹಿಸೋದಕ್ಕೆ ಆಗದೇ ಇರುವವರು ಮಾಡಿದ ಕುತಂತ್ರ ಎಂದು ಆರೋಪಿಸಿದ್ದಾರೆ. ಸಿಎಂ ಆಗಿ ಸಿದ್ದರಾಮಯ್ಯ ಉತ್ತಮ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಉತ್ತಮ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಈಗ ಮುಡಾ ಸೈಟ್ ವಿಚಾರವಾಗಿ, ವಿಪಕ್ಷಗಳು ಪ್ರತಿಭಟನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಹಾಗೂ ಎಲ್ಲರ ಬೆಂಬಲವಿದೆ. ಅವರೇ 5 ವರ್ಷ ಸಿಎಂ ಆಗಿರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.