ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಬೆಂಗಳೂರಿನ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ತಮ್ಮ ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಜನರು ಕೆಟ್ಟ ಕಾಮೆಂಟ್‌ಗಳನ್ನು ಮಾಡಿದ್ದು, ಇದರ ವಿರುದ್ಧ ಕಾಂಗ್ರೆಸ್ ನಾಯಕರಿಂದ ದೂರು ದಾಖಲಾಗಿದೆ.
ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್‌ನ ಕುಶಾಲ್ ಹರುವೇಗೌಡ ಮತ್ತು ಸಂಜಯ್. ಅವರು ನೀಡಿದ ದೂರಿನಲ್ಲಿ, “ಸಿದ್ದರಾಮಯ್ಯನವರು ಆಸ್ಪತ್ರೆಗೆ ಹೋಗಿದ್ದನ್ನು ಕುರಿತ ಖಾಸಗಿ ವಾಹಿನಿಯ ವರದಿಗೆ, ಕೆಲವು ಜನರು ಅಸಭ್ಯ ಹಾಗೂ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡಿದ್ದು, ಈ ಮೂಲಕ ಅವರ ಸಾವನ್ನೇ ಬಯಸುವ ರೀತಿಯ ಹೇಳಿಕೆಗಳನ್ನೂ ಹಾಕಲಾಗಿದೆ ಎಂದು ತಿಳಿಸಿದ್ದಾರೆ.
ಇಂತಹ ಪೋಸ್ಟ್‌ಗಳು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳಿಗೆ ನೋವು ಉಂಟುಮಾಡುತ್ತವೆ. ಇದರೊಂದಿಗೆ ಸಮಾಜದ ಶಾಂತಿಯನ್ನೂ ಕೆದಕುವ ಸಾಧ್ಯತೆ ಇದೆ. ಹಾಗಾಗಿ ತಪ್ಪಿತಸ್ಥರನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರುದಾರರು ಒತ್ತಾಯಿಸಿದ್ದಾರೆ. ದೂರಿಗೆ ಅಸಭ್ಯ ಕಾಮೆಂಟ್‌ಗಳ ಸ್ಕ್ರೀನ್ ಶಾಟ್‌ಗಳ ಪ್ರತಿಗಳನ್ನು ಕೂಡಾ ಲಗತ್ತಿಸಲಾಗಿದೆ ಎಂದು ಹೇಳಲಾಗಿದೆ.