Homecinema16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ಕೊಟ್ಟ ಸಿದ್ದರಾಮಯ್ಯ!

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ಕೊಟ್ಟ ಸಿದ್ದರಾಮಯ್ಯ!

For Dai;y Updates Join Our whatsapp Group

Spread the love

ಬೆಂಗಳೂರು:- 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ಕೊಟ್ಟಿದ್ದಾರೆ. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ ಈ ಕಾರ್ಯಕ್ರಮ ಜರುಗಿದ್ದು, ಈ ವೇಳೆ, ನಟ ಶಿವರಾಜ್‌ಕುಮಾರ್ ಚಲನಚಿತ್ರೋತ್ಸವದ ಕೈಪಿಡಿ ಬಿಡುಗಡೆ ಮಾಡಿದರು.

ಇಂದಿನಿಂದ ಎಂಟು ದಿನಗಳ ಕಾಲ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದ್ದು, 60ಕ್ಕೂ ಹೆಚ್ಚು ವಿದೇಶಿ ಚಲನಚಿತ್ರಗಳು ಪ್ರದರ್ಶನಗೊಳ್ಳಲಿದೆ. ದೇಶ- ವಿದೇಶಗಳ ಸಿನಿಮಾ ಪ್ರದರ್ಶನ ಕಾಣಲಿದೆ.

ಕಾರ್ಯಕ್ರಮ ಉದ್ಘಾಟನೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿದ್ದ ಮೌಲ್ಯಗಳು ಮತ್ತು ಘನತೆ ಈಗಿನ ಸಿನಿಮಾಗಳಲ್ಲಿ ಕಾಣುತ್ತಿಲ್ಲ. ರಾಜ್ ಕುಮಾರ್ ಸಿನಿಮಾಗಳಲ್ಲಿ ಸೌಹಾರ್ಧ ಮತ್ತು ಮಾನವೀಯ ಮೌಲ್ಯಗಳು ತುಂಬಿರುತ್ತಿದ್ದವು. ಹೀಗಾಗಿ ಸರ್ವರಿಗೂ ಇವರ ಸಿನಿಮಾಗಳು ಇಷ್ಟ ಆಗುತ್ತಿದ್ದವು. ಮೌಡ್ಯಗಳನ್ನು ಬಿತ್ತುವ, ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾದ ಸಿನಿಮಾಗಳು ಸಮಾಜಕ್ಕೆ ಒಳ್ಳೆಯದಲ್ಲ. ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸಿನಿಮಾಗಳು ಮತ್ತೆ ಮೌಡ್ಯಗಳನ್ನು ಬಿತ್ತುವುದಕ್ಕೆ ಹೋಗಬಾರದು ಎಂದು ಅವರು ಹೇಳಿದ್ದಾರೆ.

“ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ. ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ. ತಂತ್ರಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಸೆಯುವ ಸಿನಿಮಾಗಳನ್ನು ವಿಶ್ವದರ್ಜೆ ಗುಣಮಟ್ಟದಲ್ಲಿ ಇಲ್ಲಿ ನಿರ್ಮಾಣ ಆಗಬೇಕು” ಎಂದರು.

ನಮ್ಮಲ್ಲಿ ಅಸಹನೆ ಹೆಚ್ಚುತ್ತಿರುವುದರಿಂದ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಸಂಪತ್ತಿನ ಅಸಮಾನ ಹಂಚಿಕೆ ಈ ಅಸಂತೋಷಕ್ಕೆ ಕಾರಣ. ದೇಶದ 1% ಜನರ ಕೈಯಲ್ಲಿ ದೇಶದ 50% ಸಂಪತ್ತು ಸೇರಿಕೊಂಡಿದೆ. ಸಂಪತ್ತಿನ ಈ ವಿಪರೀತ ಅಸಮಾನ ಹಂಚಿಕೆ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಇದಕ್ಕೆ ಕಲಾ ಮಾಧ್ಯಮ ಆಗಿರುವ ಸಿನಿಮಾಗಳು ಪರಿಹಾರ ಹುಡುಕಬೇಕು. ಸಮಾಜವನ್ನು ಕಲಾ ಮಾಧ್ಯಮದ ಮೂಲಕ ಬೆಸೆಯಬೇಕು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!