ಬೆಳಗಾವಿ: ಕಾಂಗ್ರೆಸ್ ಸರ್ಕಾರ ಬರಲು, ಕಾಂಗ್ರೆಸ್ 135 ಸ್ಥಾನ ಗೆಲ್ಲಲು ಸಿದ್ದರಾಮಯ್ಯನವರೇ ಮೂಲ ಕಾರಣ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯುವುದು ಮತ್ತು ಕೆಳಗಿಳಿಯುವುದು ಅವರ ಆಂತರಿಕ ವಿಷಯ.
ಆದರೆ, ಕಾಂಗ್ರೆಸ್ ಸರ್ಕಾರ ಬರಲು, ಕಾಂಗ್ರೆಸ್ 135 ಸ್ಥಾನ ಗೆಲ್ಲಲು ಸಿದ್ದರಾಮಯ್ಯನವರೇ ಮೂಲ ಕಾರಣ. ಕೆಲವರು ಎದೆ ಉಬ್ಬಿಸಿ ಈ ಸರ್ಕಾರ ಬರಲು ನನ್ನ ಪಾತ್ರವೂ ಇದೆ ಎನ್ನುತ್ತಿದ್ದಾರೆ ಎನ್ನುವ ಮೂಲಕ ಡಿಸಿಎಂ ಡಿ. ಕೆ ಶಿವಕುಮಾರ್ ವಿರುದ್ಧ ಪರೋಕ್ಷವಾಗಿ ಗುಡುಗಿದ ರಮೇಶ್ ಜಾರಕಿಹೊಳಿ, ಒಂದು ವೇಳೆ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಿದರೆ, ಕಾಂಗ್ರೆಸ್ ಪಕ್ಷದ ಅಧೋಗತಿ ಆರಂಭ ಎಂದು ಭವಿಷ್ಯ ನುಡಿದರು.



