ಉಡುಪಿ:- ಸಿದ್ದರಾಮಯ್ಯ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದ ಕೇಸ್ ಗೆ ಸಂಬಧಪಟ್ಟಂತೆ ಬಿಜೆಪಿ ಮುಖಂಡನ ವಿರುದ್ಧ FIR ದಾಖಲಾಗಿದೆ. ಶಾಸಕ ಯಶ್ಪಾಲ್ ಸುವರ್ಣ ಸೇರಿದಂತೆ 11 ಜನರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
ಇನ್ನೂ ಪ್ರಾಂಶುಪಾಲರಿಗೆ ಘೋಷಿಸಿದ್ದ ಪ್ರಶಸ್ತಿ ತಡೆ ಹಿಡಿದಿದ್ದಕ್ಕೆ ಬಿಜೆಪಿ ನಾಯಕರು ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ರಸ್ತೆ ತಡೆದು ಮುಖ್ಯಮಂತ್ರಿಗಳ ಪ್ರತಿಕೃತಿ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚಿದ್ದರು. ಹಿಂದೂ ವಿರೋಧಿ ಸಿದ್ದರಾಮಯ್ಯರನ್ನು ತೊಲಗಿಸಿ ಎಂದು ಘೋಷಣೆ ಕೂಗಿದ್ದರು.
ಶಾಂತಿಗೆ ಭಂಗ ತರುವ ಉದ್ದೇಶದಿಂದ ಕೃತ್ಯ ಎಸಗಿದ್ದಾರೆ ಎಂದು ಎನ್ ಎಸ್ ಯುಐ ಮುಖಂಡ ಸೌರಭ್ ಬಲ್ಲಾಳ್ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ಹಿನ್ನೆಲೆಯಲ್ಲಿ FIR ದಾಖಲಾಗಿದೆ.