ಸಿದ್ದರಾಮಯ್ಯನವರೇ ರಾಜೀನಾಮೆ ಕೊಡಿ, ನಿರ್ದೋಷಿಯಾಗಿ ಹೊರಗೆ ಬನ್ನಿ: ನಟ ಜಗ್ಗೇಶ್

0
Spread the love

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮುಡಾ ಹಗರಣ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ರಾಜ್ಯಪಾಲರ ಆದೇಶವನ್ನು ಹೈಕೋರ್ಟ್​ ಎತ್ತಿ ಹಿಡಿದ ಬೆನ್ನಲ್ಲೇ ಇದೀಗ ಜನಪ್ರತಿನಿಧಿಗಳ ಕೋರ್ಟ್​ನಲ್ಲೂ ಸಹ ಸಿಎಂ ಸಿದ್ದರಾಮಯ್ಯಗೆ ಹಿನ್ನೆಡೆಯಾಗಿದೆ. ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ಹೊರಡಿಸಿದೆ. ಇನ್ನೂ ಈ ಬಗ್ಗೆ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಪ್ರತಿಕ್ರಿಯೇ ನೀಡಿದ್ದಾರೆ.

Advertisement

ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮಾಡಿದ್ದು ತಪ್ಪು ಎಂದು ನ್ಯಾಯಾಲಯ ಕೂಡ ಹೇಳಿದೆ. ಆದರೂ ಸಿದ್ದರಾಮಯ್ಯ ಸಮರ್ಥಿಸಿಕೊಳ್ಳುತ್ತಿರುವುದು ಸರಿಯಲ್ಲ. ಮುಡಾ ಹಗರಣ ಮೂಲಕ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕಕ್ಕೆ ಸಿದ್ದರಾಮಯ್ಯ ಘನವಾದ ಹೆಸರು ತಂದುಕೊಟ್ಟಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ತಾವು ಹಿಡಿದಿದ್ದ ಸಂವಿಧಾನಕ್ಕೆ ಎಷ್ಟು ಪುಟ ಇದೆ ಎಂದು ಹೇಳಲು ಆಗಲಿಲ್ಲ. ಅಂತಹವರನ್ನು ಪ್ರಧಾನಿ ಮಾಡಲು ಹೊರಟಿದ್ದಾರೆ. ಅಂತಹ ನಾಯಕನ ಕೆಳಗೆ ಇರುವ ಸಿದ್ದರಾಮಯ್ಯ ಘನವಾದ ಕೆಲಸ ಮಾಡಿದ್ದಾರೆ. ರಾಜ್ಯದ ಮಾನ ಮರ್ಯಾದೆ ಈಗಾಗಲೆ ಹರಾಜಾಗಿದೆ. ರಾಜೀನಾಮೆ ಕೊಡಿ, ನಿರ್ದೋಷಿಯಾಗಿ ಹೊರಗೆ ಬನ್ನಿ ಎಂದು ಆಗ್ರಹಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here