ಉಡುಪಿ: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆಯನ್ನು ಎದುರಿಸಲಿ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ಹಾಗೂ ವಾಲ್ಮೀಕಿ ಹಗರಣದ ಬಗ್ಗೆ ಬಹಳಷ್ಟು ಚರ್ಚೆ ನಡೆದಿದೆ.
Advertisement
ಈಗಾಗಲೇ ಎಫ್‍ಐಆರ್ ಕೂಡ ದಾಖಲಾಗಿದೆ. ಮುಖ್ಯಮಂತ್ರಿಗಳು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ರಾಜೀನಾಮೆ ಕೊಟ್ಟು ತನಿಖೆಯನ್ನು ಎದುರಿಸಲಿ. ತನಿಖೆಯಲ್ಲಿ ಏನು ವರದಿ ಬರುತ್ತದೆ ಎಂಬುದನ್ನು ನೋಡಿ ಮುಂದುವರೆಯಲಿ ಎಂದಿದ್ದಾರೆ.
ಮಹಿಷ ದಸರಾ ವಿಚಾರವಾಗಿ ಪ್ರತಿಕ್ರಿಯಿಸಿ. ಸಂವಿಧಾನದಲ್ಲಿ ಯಾವುದೇ ನಂಬಿಕೆಗಳನ್ನು ಇಟ್ಟುಕೊಳ್ಳಲು ಅವಕಾಶವಿದೆ. ಮನೆಯಲ್ಲಿ ಯಾವುದೇ ಆಚರಣೆ ಮಾಡಬಹುದು. ಅಲ್ಲದೇ ಸಾರ್ವಜನಿಕ ಸ್ಥಳಗಳಲ್ಲೂ ಸರ್ಕಾರದಿಂದ ಅನುಮತಿ ಪಡೆದು ಮಾಡಿಕೊಳ್ಳಬಹುದು. ನಿಯಮ ಅನುಸರಿಸಿ ಆಚರಣೆ ಮಾಡಿದರೆ ನಮಗೂ ಸಂತೋಷ ಎಂದರು.