ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಸ್ಟಿಂಗ್ ವಿಡಿಯೋ ಪ್ರಕರಣದ ತನಿಖೆ ಮುಂದುವರಿದಿದ್ದು, ಪ್ರಕರಣದಲ್ಲಿ ಆರೋಪಿತೆಯಾಗಿರುವ ಕೃಪಾ ಆಳ್ವಾ ಇಂದು ಸಿಸಿಬಿ ವಿಚಾರಣೆ ಎದುರಿಸುವ ಸಾಧ್ಯತೆಯಿದೆ.

ಸ್ಟಿಂಗ್ ವಿಡಿಯೋ ಚಿತ್ರೀಕರಣದ ವೇಳೆ ಸಂತ್ರಸ್ತೆ ಎನ್ನಲಾದ ಮಹಿಳೆಯೊಂದಿಗೆ ಕೃಪಾ ಆಳ್ವಾ ಕೂಡ ಇದ್ದರು ಎನ್ನಲಾಗಿದೆ. ಈ ವಿಚಾರವಾಗಿ ಈ ಹಿಂದೆಯೇ ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಕೃಪಾ ಆಳ್ವಾ ಅವರಿಂದ ಮಾಹಿತಿ ಪಡೆದಿದ್ದರು.
ಆದರೆ ಪ್ರಕರಣದ ಕುರಿತು ಇನ್ನಷ್ಟು ಮಾಹಿತಿ ಸಂಗ್ರಹಿಸುವ ಅಗತ್ಯವಿರುವ ಹಿನ್ನೆಲೆಯಲ್ಲಿ ಪೊಲೀಸರು ಮತ್ತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಇಂದು ಬೆಳಗ್ಗೆ 10 ಗಂಟೆಯ ನಂತರ ಸಿಸಿಬಿ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ. ಕೃಪಾ ಆಳ್ವಾ ಅವರ ವಿಚಾರಣೆಯಿಂದ ತನಿಖೆಗೆ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆಯೇ ಎಂಬುದು ಕುತೂಹಲ ಮೂಡಿಸಿದೆ.










