HomeKarnataka Newsಸಿದ್ದರಾಮಯ್ಯ ವಯನಾಡು ಕಳಕಳಿ ಗುಲಾಮಗಿರಿ ಸಂಕೇತ: CM ಟೀಕಿಸಿದ CT ರವಿ!

ಸಿದ್ದರಾಮಯ್ಯ ವಯನಾಡು ಕಳಕಳಿ ಗುಲಾಮಗಿರಿ ಸಂಕೇತ: CM ಟೀಕಿಸಿದ CT ರವಿ!

For Dai;y Updates Join Our whatsapp Group

Spread the love

ಬೆಂಗಳೂರು:- ಸಿದ್ದರಾಮಯ್ಯ ವಯನಾಡು ಕಳಕಳಿ ಗುಲಾಮಗಿರಿಯ ಸಂಕೇತ ಎಂದು ಹೇಳುವ ಮೂಲಕ ಬಿಜೆಪಿ ಮುಖಂಡ ಸಿಟಿ ರವಿ ಹಿಗ್ಗಾಮುಗ್ಗಾ ವಾಗ್ದಾಳಿ ಮಾಡಿದ್ದಾರೆ.

ನೆರೆ ರಾಜ್ಯ ಕೇರಳ ಪ್ರವಾಹ ಸಂತ್ರಸ್ತರಿಗೆ ಮನೆ ನಿರ್ಮಾಣ ಮಾಡುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದ ಬಗ್ಗೆ ಬಿಜೆಪಿ ನಾಯಕ ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಸರ್ಕಾರ ‌ಕೇರಳದಲ್ಲಿ ನೆರೆ ಸಂತ್ರಸ್ತರಿಗೆ ಮನೆ ಕಟ್ಟಿಕೊಡುವ ಭರವಸೆ ನೀಡಿದೆ. ಮಾನವೀಯ ನೆಲೆಯಲ್ಲಿ ಮಾಡುವುದೇನೋ ಸರಿ. ಆದರೆ, ಸಿದ್ದರಾಮಯ್ಯ ಅವರ ಈ ನಡೆ ಮಾನವೀಯ ನೆಲೆಯಿಂದ ಕಾಣುತ್ತಿಲ್ಲ. ಇದು ಗುಲಾಮಗಿರಿಯ ಸಂಕೇತ.

ಹಿಂದೆ ರಾಹುಲ್ ಗಾಂಧಿ, ಈಗ ಪ್ರಿಯಾಂಕಾ ಗಾಂಧಿ ಅಲ್ಲಿ ಸಂಸದರಾಗಿದ್ದಾರೆ. ನಮ್ಮ ರಾಜ್ಯದಲ್ಲಿ ಇಲ್ಲಿ ಬಾಣಂತಿಯರ ಸಾವು, ಎತ್ತಿನಹೊಳೆ ಯೋಜನೆ ಸಂಬಂಧ ಅಧಿಕಾರಿ ಜೊತೆ ಜಗಳ ಮಾಡಿ ರೈತರೊಬ್ಬರು ಹೊಳೆಗೆ ಹಾರಿ ಸಾವನ್ನಪ್ಪಿದ್ದಾರೆ. ಇದರ ಕುರಿತು ರಾಜ್ಯ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಸಿಟಿ ರವಿ ಕಿಡಿಕಾರಿದ್ದಾರೆ.

ರಾಜ್ಯದಲ್ಲಿನ ಸಮಸ್ಯೆಗಳ ಬಗ್ಗೆ ನಿಮಗೆ ಕಾಳಜಿ ಇಲ್ಲ. ನಿಮ್ಮ ವಯನಾಡು ಕಳಕಳಿ ಗುಲಾಮಗಿರಿಯ ಸಂಕೇತ. ಈ ಪ್ರಶ್ನೆಯನ್ನು ವಿಧಾನಸಭೆಯಲ್ಲೂ ಮಾಡುತ್ತೇವೆ. ಬಾಣಂತಿಯರ ಸಾವು, ಹಸುಗೂಸುಗಳ ಸಾವು ಪ್ರಕರಣ ಸಂಬಂಧ ಎಸ್​ಐಟಿ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!