ಸಿದ್ಧಾಂತವೇ ಇಲ್ಲದ ಸಿದ್ದರಾಮಯ್ಯ ಇಂದು ನಮ್ಮ ಮುಂದೆ ಇದ್ದಾರೆ: ಆರ್.ಆಶೋಕ್ ಕಿಡಿ

0
Spread the love

ಬೆಂಗಳೂರು: ಸಿದ್ಧಾಂತವೇ ಇಲ್ಲದ ಸಿದ್ದರಾಮಯ್ಯ ಇಂದು ನಮ್ಮ ಮುಂದೆ ಇದ್ದಾರೆ ಎಂದು ವಿಪಕ್ಷ ನಾಯಕ ಆರ್.ಆಶೋಕ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮಾನಸಿಕ ಸ್ಥಿತಿ ಪೂರ್ತಿ ಮುಸ್ಲಿಮರ ಮತದ ಬಗ್ಗೆಯೇ ಯೋಚಿಸುವ ರೀತಿ ಆಗಿರುವುದು ದುರದೃಷ್ಟಕರ. ಹಾಗಾದರೆ ಸತ್ತಿರುವವರ ಪ್ರಾಣಕ್ಕೆ ಬೆಲೆಯೇ ಇಲ್ಲವೇ? ಹಮಾಸ್ ಉಗ್ರರು ಬಂದು ತರಬೇತಿ ನೀಡಿ ಕಳುಹಿಸಿದ್ದರು.

Advertisement

ಎಂಬುದು ಮಾಹಿತಿಗಳ ಮೂಲಕ ಹೊಂದಾಣಿಕೆ ಆಗುತ್ತಿದೆ. ಅದನ್ನು ಸಿದ್ದರಾಮಯ್ಯ ಅವರು ಮಾತ್ರ ಕ್ಷಮಿಸಬಹುದಷ್ಟೇ. ದೇಶಕ್ಕೆ ಏನು ಆದರೂ ಪರವಾಗಿಲ್ಲ, ತಮಗೆ ಮತ ಬಿದ್ದರೆ ಸಾಕು ಎಂಬ ಮನಸ್ಥಿತಿಗೆ ಬಂದಿದ್ದಾರೆ. ಸಿದ್ಧಾಂತವೇ ಇಲ್ಲದ ಸಿದ್ದರಾಮಯ್ಯ ಇಂದು ನಮ್ಮ ಮುಂದೆ ಇದ್ದಾರೆ ಎಂದು ಕಿಡಿಕಾರಿದ್ದಾರೆ.

ನಿಮ್ಮ ಮನೆಯಲ್ಲಿ ಈ ರೀತಿ ಉಗ್ರರು ಬಂದು ಹೊಡೆದು ಹಾಕಿರುತ್ತಿದ್ದರೆ ಈ ರೀತಿ ಹೇಳುತ್ತಿದ್ದರಾ? ಹಾಗಾದರೆ ಸತ್ತವರ ಮನೆ ಬಾಗಿಲಿಗೆ ಹಾರ ಹಾಕಲು ಯಾಕೆ ಹೋಗಿದ್ರಿ? ಇಲ್ಲಿ ಬಂದು ಸತ್ತವರು ಸತ್ತರು ಎನ್ನುವುದು ನಾಚಿಕೆಗೇಡಿನ ಸಂಗತಿ. ಮಲ್ಲಿಕಾರ್ಜುನ ಖರ್ಗೆ ಎಲ್ಲರೂ ಒಟ್ಟಾಗಿ ಹೋರಾಡೋಣ ಎಂದಿದ್ದಾರೆ. ಇಲ್ಲಿ ಸಿದ್ದರಾಮಯ್ಯ ಮನೆ ಮುರಿಯುವ ಮಾತಾಡಿದ್ದಾರೆ.

ಯಾವುದೇ ಪಾಕಿಸ್ತಾನಿ ಭಾರತದಲ್ಲಿ ಇರಬಾರದು ಎಂದು ಕೇಂದ್ರ ಸರ್ಕಾರ ಸೂಚನೆ ಕೊಟ್ಟಿದೆ. ಭಟ್ಕಳದಲ್ಲಿ 10ಕ್ಕಿಂತ ಹೆಚ್ಚು ಪಾಕಿಸ್ತಾನದವರು ಇದ್ದಾರೆ. ಆದರೆ ಪಾಕಿಸ್ತಾನದಲ್ಲಿ ಈಗಾಗಲೇ ಭಾರತೀಯರನ್ನು ಹೊರ ಹಾಕಿದ್ದಾರೆ. ಇದರ ಬಗ್ಗೆ ಸಿದ್ದರಾಮಯ್ಯ ಯಾಕೆ ಮಾತನಾಡುತ್ತಿಲ್ಲ. ಕೂಡಲೇ ಭಟ್ಕಳದಲ್ಲಿರುವ ಪಾಕಿಸ್ತಾನದವರನ್ನು ಒದ್ದು ಹೊರ ಹಾಕಬೇಕು. ಮೀರ್ ಸಾಧಿಕ್‌ನಂತವರು ನಮ್ಮಲ್ಲೇ ಇದ್ದಾರೆ ಎಂದು ಆರೋಪಿಸಿದರು.


Spread the love

LEAVE A REPLY

Please enter your comment!
Please enter your name here