ಮಹಾರಾಷ್ಟ್ರ ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ: ಫಡ್ನವಿಸ್ ಬಳಿ ಸಿಎಂ ಮಾಡಿದ ಮನವಿ ಏನು?

0
Spread the love

ಬೆಂಗಳೂರು:- ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್‌ಗೆ ಪತ್ರ ಬರೆದು ಮನವಿಯೊಂದನ್ನು ಮಾಡಿದ್ದಾರೆ.

Advertisement

ಪತ್ರದಲ್ಲಿ ಏನಿದೆ?

ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಇದೆ. ಹಾಗಾಗಿ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುವಂತೆ ಮನವಿ ಮಾಡಿದ್ದಾರೆ. ಅಷ್ಟೇ ಅಲ್ಲದೇ ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಬಿಡುವಂತೆ‌ಯೂ ಮನವಿ ಮಾಡಿದ್ದಾರೆ.

ಈ ಹಿಂದೆ ಬೇಸಿಗೆಯಲ್ಲಿ ಕಾಲದಲ್ಲಿ ಕುಡಿಯುವ ನೀರು ಪೂರೈಕೆಗೆ ಕೃಷ್ಣಾ ನದಿಯಿಂದ ನೀರನ್ನು ಬಿಡುಗಡೆ ಮಾಡಲು ಮಹಾರಾಷ್ಟ್ರ ಸರ್ಕಾರವು ಸಕಾರಾತ್ಮಕವಾಗಿ ಸ್ಪಂದಿಸಿತ್ತು. ಕರ್ನಾಟಕ ಸರ್ಕಾರವು ಈ ಮೂಲಕ ಮಹಾರಾಷ್ಟ್ರಕ್ಕೆ ಧನ್ಯವಾದಗಳನ್ನು ತಿಳಿಸುತ್ತೆ. ಹಿಪ್ಪರಗಿ ಬ್ಯಾರೇಜ್ ಮತ್ತು ಇತರ ಸ್ಥಳೀಯ ಜಲಾಶಯಗಳಲ್ಲಿ ಶೇಖರಣಾ ನೀರು ಮುಂಗಾರು ಹಂಗಾಮು ತನಕ ಸಾಕಾಗುವುದಿಲ್ಲ.

ಕೃಷ್ಣಾ ಜಲಾನಯನ ಪ್ರದೇಶದ ಉತ್ತರ ಕರ್ನಾಟಕ ಜಿಲ್ಲೆಗಳ ಕುಡಿಯುವ ನೀರಿಗೂ ಸಾಕಾಗುವುದಿಲ್ಲ. ಹಾಗಾಗಿ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಕನಿಷ್ಠ 2 ಟಿಎಂಸಿ, ಉಜ್ಜಿನಿ ಜಲಾಶಯದಿಂದ ಭೀಮಾ ನದಿಗೆ 1 ಟಿಎಂಸಿ ನೀರನ್ನ ಬಿಡುಗಡೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಸಿಎಂ ಮನವಿ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here