ಬೆಂಗಳೂರು:- ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.
Advertisement
ಹೀಗಾಗಿ ಪ್ರಧಾನಿ ಮೋದಿ ಭೇಟಿಗೆಂದು ದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಅವರು, ಇಂದು ಬೆಳಗ್ಗೆ ದೆಹಲಿಯಿಂದ ಬರುತ್ತಿದ್ದಂತೆ ಆಸ್ಪತ್ರೆಗೆ ಭೇಟಿ ನೀಡಿ ಪತ್ನಿ ಪಾರ್ವತಿ ಅವರ ಆರೋಗ್ಯ ವಿಚಾರಿಸಿದ್ದಾರೆ.
ವಿಮಾನ ನಿಲ್ದಾಣದಿಂದ ನೇರವಾಗಿ ಶೇಷಾದ್ರಿಪುರಂನಲ್ಲಿರುವ ಆಸ್ಪತ್ರೆಗೆ ಆಗಮಿಸಿ ಐಸಿಯುನಲ್ಲಿರುವ ಪತ್ನಿಯ ಆರೋಗ್ಯ ವಿಚಾರಿಸಿದರು.ನಂತರ ಅರ್ಧಗಂಟೆಗೂ ಹೆಚ್ಚು ಕಾಲ ವೈದ್ಯರ ಜೊತೆ ಸಿಎಂ ಸಮಲೋಚನೆ ನಡೆಸಿದರು.
ಬಳಿಕ ಮಾತನಾಡಿದ ಸಿಎಂ, ಆರೋಗ್ಯ ಸ್ಥಿರವಾಗಿದ್ದು ಏನು ಸಮಸ್ಯೆ ಇಲ್ಲ. ಶ್ವಾಸಕೋಶ ಸೋಂಕು ಇದೆ, ಈಗ ಸುಧಾರಣೆ ಕಾಣುತ್ತಿದೆ. ಇನ್ನೂ 2-3 ದಿನ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ ಎಂದು ಹೇಳಿ ತೆರಳಿದರು.


