ಬೆಂಗಳೂರು:- ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿ ಮಾಡಿದ್ದ ಮುಡಾ ಪ್ರಕರಣದಲ್ಲಿ ಮಹತ್ವದ ಟ್ವಿಸ್ಟ್ ಸಿಕ್ಕಿದ್ದು, ಮುಡಾದ ಮಾಜಿ ಆಯುಕ್ತ ದಿನೇಶ್ ಕುಮಾರ್ ರನ್ನು ಇಡಿ ಅರೆಸ್ಟ್ ಮಾಡಿದೆ.
ಇಂದು ಇಡಿ ವಿಚಾರಣೆಗೆ ಬರುವಂತೆ ದಿನೇಶ್ ಕುಮಾರ್‌ಗೆ ನೋಟಿಸ್ ನೀಡಿತ್ತು. ವಿಚಾರಣೆಗೆ ಬಂದ ವೇಳೆ ದಿನೇಶ್ ಕುಮಾರ್ ಅವರನ್ನು ಬಂಧನ ಮಾಡಲಾಗಿದೆ. ನಕಲಿ ದಾಖಲೆಗಳನ್ನು ದಿನೇಶ್ ಸೃಷ್ಟಿ ಮಾಡಿ ಈ ದಾಖಲೆಗಳ ಮೂಲಕ ಸೈಟ್ ಗಳನ್ನು ಮರುಹಂಚಿಕೆ ಮಾಡಿ ಲಾಭ ಮಾಡಿದ್ದಾರೆ. ಹಣ ಪಡೆದು ಆಸ್ತಿ ಗಳಿಕೆ ಮಾಡಿರುವುದಕ್ಕೆ ದಾಖಲೆ ಪತ್ತೆಯಾಗಿದೆ ಎಂದು ಇಡಿ ಹೇಳಿದೆ.
ಹೌದು, ಕರ್ನಾಟಕದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣವು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದವು. ಇದೀಗ ಈ ಹಗರಣದಲ್ಲಿ ಮುಡಾದ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಮುಖ್ಯ ಪಾತ್ರ ವಹಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ ತನಿಖೆಯಲ್ಲಿ ಬಹಿರಂಗವಾಗಿದೆ. ಇನ್ನು ಇಡಿ ಅಧಿಕಾರಿಗಳು ದಿನೇಶ್ ಕುಮಾರ್ ಆಸ್ತಿಗಳ ಮೇಲೆ ದಾಳಿ ನಡೆಸಿ, ಕೋಟ್ಯಂತರ ರೂಪಾಯಿಗಳ ಮೌಲ್ಯದ ಸ್ಥಿರಾಸ್ತಿಗಳನ್ನು ಜಪ್ತಿ ಮಾಡಿಕೊಂಡಿದ್ದರು. ಇದೀಗ ಇಡಿ ಅಧಿಕಾರಿಗಳು ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಬಂಧನ ಮಾಡಿದೆ.



