ಸೆ. 20ಕ್ಕೆ ಕುರುಬರ ಸಂಘದ ರಜತ ಮಹೋತ್ಸವ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ತಾಲೂಕು ಕುರುಬರ ಸಂಘದ ರಜತ ಮಹೋತ್ಸವ ಸಮಾರಂಭ ಸೆ. 20ರಂದು ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ರೋಣ ಶಾಸಕ ಜಿ.ಎಸ್. ಪಾಟೀಲ ಹೇಳಿದರು.

Advertisement

ಗುರುವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. 20ರಂದು ಬೆಳಿಗ್ಗೆ 11 ಗಂಟೆಗೆ ಕನಕ ಭವನದ ರಾಕೇಶ ಸಿದ್ದರಾಮಯ್ಯ ಸಭಾಂಗಣದಲ್ಲಿ ಕುರುಬರ ಸಂಘದ ರಜತ ಮಹೋತ್ಸವದ ಸ್ಮರಣ ಸಂಚಿಕೆ ಬಿಡುಗಡೆ, ರಾಜ್ಯಮಟ್ಟದ ಕನಕೋತ್ಸವ ಮತ್ತು ಸಂಘಜೀವಿ ಫಕೀರಪ್ಪ ಹೆಬಸೂರ ಅವರ ಅಭಿನಂದನಾ ಗ್ರಂಥ ಸಮರ್ಪಣೆ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.

ಅಭಿನಂದನಾ ಗ್ರಂಥವನ್ನು ಸಿಎಂ ಸಿದ್ದರಾಮಯ್ಯ ಬಿಡುಗಡೆಗೊಳಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡುವರು. ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ನಾಮಫಲಕ ಅನಾವರಣ ಮಾಡಲಿದ್ದು, ಗದಗ ತಾಲೂಕು ಕುರುಬರ ಸಂಘದ ಅಧ್ಯಕ್ಷ ಫಕೀರಪ್ಪ ಹೆಬಸೂರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಗದಗ ತಾಲೂಕು ಕುರುಬರ ಸಂಘದ ಅಧ್ಯಕ್ಷ ಫಕೀರಪ್ಪ ಹೆಬಸೂರ, ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ, ಮಾಜಿ ಶಾಸಕ ಬಿ.ಆರ್. ಯಾವಗಲ್ಲ, ಜಿ.ಪಂ ಮಾಜಿ ಅಧ್ಯಕ್ಷ ವಾಸಪ್ಪ ಕುರುಡಗಿ ಹಾಗೂ ಕುರುಬ ಸಮಾಜದ ಹಿರಿಯರು, ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಹಲವಾರು ಸಚಿವರು, ಶಾಸಕರು, ಸಂಸದರು, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ, ಕಾರ್ಮಿಕ ಸಚಿವ ಸಂತೋಷ ಲಾಡ್, ಕರ್ನಾಟಕ ರಾಜ್ಯ ಪಂಚವರ್ಷ ಯೋಜನೆ ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಎಚ್.ಎಮ್. ರೇವಣ್ಣ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಮತ್ತು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸುವರು ಎಂದು ಶಾಸಕ ಜಿ.ಎಸ್. ಪಾಟೀಲ ತಿಳಿಸಿದರು.


Spread the love

LEAVE A REPLY

Please enter your comment!
Please enter your name here