HomeDharwadಮಧು ಮೋಹನ್ ಖಂಡೇಕರಗೆ ಬೆಳ್ಳಿ ಪದಕ

ಮಧು ಮೋಹನ್ ಖಂಡೇಕರಗೆ ಬೆಳ್ಳಿ ಪದಕ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ : ಕರ್ನಾಟಕ ವಿಶ್ವವಿದ್ಯಾಲಯದ ಯೋಗ ಅಧ್ಯಯನ ವಿಭಾಗದ ವಿದ್ಯಾರ್ಥಿನಿ ಮಧು ಮೋಹನ್ ಖಂಡೇಕರ್ ಅವರು ಮೇ 15ರಿಂದ 19ರವರೆಗೆ ದೆಹಲಿಯ ದ್ವಾರಕಾದಲ್ಲಿ ನಡೆದ ರಾಷ್ಟçಮಟ್ಟದ ಭಾರತದ ಕೌಶಲ್ಯ ಸ್ಪರ್ಧೆಯಲ್ಲಿ (India skill 2024 national level compitition) ಭಾಗವಹಿಸಿ ಬೆಳ್ಳಿಯ ಪದಕ ಪಡೆದುಕೊಂಡಿದ್ದಾರೆ.

ಈ ಕಾರ್ಯಕ್ರಮದಲ್ಲಿ 400ಕ್ಕೂ ಹೆಚ್ಚು ಉದ್ಯಮ ತಜ್ಞರು ಸೇರಿದಂತೆ ದೇಶದ ಎಲ್ಲಾ ರಾಜ್ಯಗಳು ಮತ್ತು ಎಲ್ಲಾ ಕೇಂದ್ರಾಡಳಿತ ಪ್ರದೇಶಗಳಿಂದ 900ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. ಕರ್ನಾಟಕ ವಿಶ್ವವಿದ್ಯಾಲಯದ ಯೋಗ ಅಧ್ಯಯನ ವಿಭಾಗದ ವಿದ್ಯಾರ್ಥಿನಿ ಮಧು ಮೋಹನ್ ಖಂಡೇಕರ್ ಕರ್ನಾಟಕವನ್ನು ಪ್ರತಿನಿಧಿಸಿದ್ದರು.

13 ಚಿನ್ನ, 12 ಬೆಳ್ಳಿ, 3 ಕಂಚು, ಹಾಗೂ 19 ಶ್ರೇಷ್ಠತೆ (excellence) ಒಟ್ಟಾರೆ 47 ಪದಕ ಪಡೆಯುವುದರ ಮೂಲಕ ಕರ್ನಾಟಕ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಯೋಗ ಅಧ್ಯಯನ ವಿಭಾಗದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!