HomeSports Newsಏಷ್ಯನ್ ಗೇಮ್ಸ್ʼನಲ್ಲಿ ಮೀರಾಬಾಯಿ ಚಾನುಗೆ ಬೆಳ್ಳಿ ಪದಕ; ಭಾರತದ ಕ್ರೀಡಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು

ಏಷ್ಯನ್ ಗೇಮ್ಸ್ʼನಲ್ಲಿ ಮೀರಾಬಾಯಿ ಚಾನುಗೆ ಬೆಳ್ಳಿ ಪದಕ; ಭಾರತದ ಕ್ರೀಡಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು

For Dai;y Updates Join Our whatsapp Group

ಟೊಕಿಯೊ: ಭಾರತದ ಸ್ಟಾರ್ ವೇಟ್‌ಲಿಫ್ಟರ್ ಮೀರಾಬಾಯಿ ಚಾನು ಕೊನೆಗೂ ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆಲ್ಲುವ ಕನಸು ನನಸು ಮಾಡಿಕೊಂಡಿದ್ದಾರೆ. 2026ರ ಏಷ್ಯನ್ ಗೇಮ್ಸ್‌ನಲ್ಲಿ ಬುಧವಾರ ನಡೆದ ಮಹಿಳೆಯರ 49 ಕೆ.ಜಿ. ವಿಭಾಗದಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ.

ಇದು ಏಷ್ಯನ್ ಗೇಮ್ಸ್‌ನಲ್ಲಿ ಮೀರಾಬಾಯಿ ಚಾನು ಗೆದ್ದಿರುವ ಚೊಚ್ಚಲ ಪದಕವಾಗಿದೆ. ಸ್ಪರ್ಧೆಯಲ್ಲಿ ಸ್ನ್ಯಾಚ್ ವಿಭಾಗದಲ್ಲಿ 87 ಕೆ.ಜಿ. ಹಾಗೂ ಕ್ಲೀನ್ ಆ್ಯಂಡ್ ಜೆರ್ಕ್‌ನಲ್ಲಿ 111 ಕೆ.ಜಿ. ಭಾರ ಎತ್ತಿದ ಚಾನು, ಒಟ್ಟು 198 ಕೆ.ಜಿ. ಭಾರ ಎತ್ತುವ ಮೂಲಕ ಬೆಳ್ಳಿ ಪದಕ ಗೆದ್ದರು.

ಉತ್ತರ ಕೊರಿಯಾದ ರಿ ಸಾಂಗ್-ಗಮ್ ಒಟ್ಟು 215 ಕೆ.ಜಿ. ಭಾರ ಎತ್ತಿ ಚಿನ್ನದ ಪದಕ ಗೆದ್ದರು. ಇದರೊಂದಿಗೆ ಅವರು ಏಷ್ಯನ್ ಗೇಮ್ಸ್‌ನಲ್ಲಿ ಸತತ ಮೂರನೇ ಬಾರಿಗೆ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದರು. ಇಂಡೋನೇಷ್ಯಾದ ಲುಲುಕ್ ಡಯಾನಾ ಟ್ರಿ ವಿಜಯಾನಾ ಒಟ್ಟು 191 ಕೆ.ಜಿ. ಭಾರ ಎತ್ತಿ ಕಂಚಿನ ಪದಕ ಪಡೆದರು.

ಮೀರಾಬಾಯಿ ಚಾನು ಅವರ ಈ ಬೆಳ್ಳಿ ಪದಕ ಮತ್ತೊಂದು ಮಹತ್ವದ ಸಾಧನೆಗೂ ಕಾರಣವಾಗಿದೆ. ಒಲಿಂಪಿಕ್ಸ್, ಏಷ್ಯನ್ ಗೇಮ್ಸ್, ಕಾಮನ್‌ವೆಲ್ತ್ ಗೇಮ್ಸ್, ವಿಶ್ವ ಚಾಂಪಿಯನ್‌ಶಿಪ್, ಏಷ್ಯನ್ ಚಾಂಪಿಯನ್‌ಶಿಪ್ ಹಾಗೂ ಕಾಮನ್‌ವೆಲ್ತ್ ಚಾಂಪಿಯನ್‌ಶಿಪ್ ಸೇರಿದಂತೆ ಪ್ರಮುಖ ಅಂತಾರಾಷ್ಟ್ರೀಯ ವೇಟ್‌ಲಿಫ್ಟಿಂಗ್ ಕೂಟಗಳಲ್ಲಿ ಪದಕ ಗೆದ್ದ ಎರಡನೇ ಭಾರತೀಯ ವೇಟ್‌ಲಿಫ್ಟರ್ ಎಂಬ ಹೆಗ್ಗಳಿಕೆಗೆ ಚಾನು ಪಾತ್ರರಾಗಿದ್ದಾರೆ.

ಈ ಸಾಧನೆ ಮಾಡಿದ ಮೊದಲ ಭಾರತೀಯ ವೇಟ್‌ಲಿಫ್ಟರ್ ಎಂಬ ಕೀರ್ತಿ ಕರ್ಣಂ ಮಲ್ಲೇಶ್ವರಿ ಅವರ ಹೆಸರಿನಲ್ಲಿದೆ. ಇದೀಗ ಮೀರಾಬಾಯಿ ಚಾನು ಕೂಡ ಈ ವಿಶೇಷ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಇನ್ನು ಮೀರಾಬಾಯಿ ಚಾನು ಅವರ ಬೆಳ್ಳಿ ಪದಕದೊಂದಿಗೆ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕಗಳ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಭಾರತ ಇದುವರೆಗೆ ಒಂದು ಚಿನ್ನ, ನಾಲ್ಕು ಬೆಳ್ಳಿ ಹಾಗೂ ನಾಲ್ಕು ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದು, ಪದಕ ಪಟ್ಟಿಯಲ್ಲಿ ಎಂಟನೇ ಸ್ಥಾನಕ್ಕೇರಿದೆ.

ಏಷ್ಯನ್ ಗೇಮ್ಸ್‌ನಲ್ಲಿ ಇದುವರೆಗೆ ಪದಕ ಗೆಲ್ಲಲು ಸಾಧ್ಯವಾಗದಿದ್ದ ಮೀರಾಬಾಯಿ ಚಾನು, ಇದೀಗ ಬೆಳ್ಳಿ ಪದಕದೊಂದಿಗೆ ತಮ್ಮ ಹೆಸರಿಗೆ ಮತ್ತೊಂದು ಮಹತ್ವದ ಸಾಧನೆಯನ್ನು ಸೇರಿಸಿಕೊಂಡಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img