ರಾಯಚೂರು:- ಸಿಂಧನೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮನೆಗಳ್ಳತನ ಮಾಡಿದ್ದ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಮೊಹಮ್ಮದ್ ಹುಸೇನ್, ನಾಸೀರ್ ಅಲಿ ಬಂಧಿತರು. 10 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ವಶಕ್ಕೆ ಪಡೆದುಕೊಂಡಿದ್ದಾರೆ.
Advertisement
ವಿಶೇಷ ತಂಡ ರಚಿಸಿ ಸಿಂಧನೂರು ನಗರದ ಪಿಡಬ್ಲ್ಯೂಡಿ ಕ್ಯಾಂಪ್‌ನ ಮನೆಯೊಂದರ ಕಳ್ಳತನ ಪ್ರಕರಣ ಭೇದಿಸಿರುವ ಪೊಲೀಸರು 110 ಗ್ರಾಂ ಚಿನ್ನಾಭರಣಗಳು, 50 ಗ್ರಾಂ ಬೆಳ್ಳಿ, ಒಂದು ಸ್ಕೂಟಿ ಸೇರಿ ಒಟ್ಟು 10.25 ಲಕ್ಷ ರೂ. ಮೌಲ್ಯದ ವಸ್ತುಗಳನ್ನ ಜಪ್ತಿ ಮಾಡಿದ್ದಾರೆ.
ಘಟನೆ ಸಂಬಂಧ ಸಿಂಧನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.