HomeCrime Newsಆಸ್ತಿಗಾಗಿ ತಂದೆಯನ್ನೇ ಮಚ್ಚಿನಿಂದ ಬರ್ಬರವಾಗಿ ಕೊಲೆಗೈದ ಪಾಪಿ ಮಗ!

ಆಸ್ತಿಗಾಗಿ ತಂದೆಯನ್ನೇ ಮಚ್ಚಿನಿಂದ ಬರ್ಬರವಾಗಿ ಕೊಲೆಗೈದ ಪಾಪಿ ಮಗ!

For Dai;y Updates Join Our whatsapp Group

Spread the love

ತುಮಕೂರು:- ಮಚ್ಚಿನಿಂದ ಹೊಡೆದು ಮಗನಿಂದಲೇ ತಂದೆಯ ಭೀಕರ ಕೊಲೆ ನಡೆದಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಆಲಪನಹಳ್ಳಿ ಗ್ರಾಮದಲ್ಲಿ ಜರುಗಿದೆ.

75 ವರ್ಷದ ವೆಂಕಟಪ್ಪ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. 45 ವರ್ಷದ ಸಿದ್ದಪ್ಪ ಎಂಬ ಮಗನಿಂದ ಈ ಘೋರ ಕೃತ್ಯ ನಡೆದಿದೆ.

ಮೃತ ವೆಂಕಟಪ್ಪ ಮೂರೂವರೆ ಎಕರೆ ಆಸ್ತಿ ಹೊಂದಿದ್ದು, ಇತ್ತೀಚೆಗೆ ಆ ಜಮೀನು ಮಾರಾಟ ಮಾಡಿದ್ದ. ಮಾರಾಟ ಮಾಡಿದ್ದ ಜಮೀನಿನ ಹಣದಲ್ಲಿ 25 ಲಕ್ಷ ಹಣವನ್ನ ಮಗಳಿಗೆ ಕೊಟ್ಟಿದ್ದ. ಹಾಗೂ ಉಳಿದ ಜಮೀನನ್ನು ಸಹ ಮಗಳ ಹೆಸರಿಗೆ ಬರೆದುಕೊಟ್ಟಿದ್ದ ಎನ್ನಲಾಗಿದೆ.

ಇದೇ ವಿಚಾರಕ್ಕೆ ತಂದೆ ಮಗನ ಜೊತೆ ಹಲವು ಬಾರಿ ಗಲಾಟೆ ನಡೆದಿತ್ತು. ಗ್ರಾಮದ ಹಿರಿಯರ ಸಮ್ಮುಖದಲ್ಲಿ ಹಲವು ಬಾರಿ ನ್ಯಾಯ ಪಂಚಾಯತಿ ಕೂಡಾ ಮಾಡಲಾಗಿತ್ತು. ನ್ಯಾಯ ಪಂಚಾಯತಿ ಮಾಡಿದ್ರು ಸಹ ಮಗನಿಗೆ ಆಸ್ತಿ, ಹಣ ನೀಡಲು ತಂದೆ ವೆಂಕಟಪ್ಪ ಹಿಂದೇಟು ಹಾಕುತ್ತಿದ್ದ.

ಇದರಿಂದ ಬೇಸತ್ತ ಮಗ ತಂದೆಯ ತಲೆಗೆ ಮಚ್ಚಿನಿಂದ ಬಲವಾಗಿ ಹೊಡೆದು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ತೀವ್ರ ರಕ್ತಸ್ರಾವದಿಂದ ವೃದ್ಧ ವೆಂಕಟಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಕೂಡಲೇ ಮಾಹಿತಿ ಆಧರಿಸಿ ಸ್ಥಳಕ್ಕೆ ಎಎಸ್ ಪಿ ಮರಿಯಪ್ಪ ಹಾಗೂ ಕೋಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಘಟನೆ ಸಂಬಂಧ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ ಮಗ ಸಿದ್ದಪ್ಪನಿಗಾಗಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!