ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಇವರ ಸಹಯೋಗದಲ್ಲಿ `ಹಾಡಿರೇ ರಾಗಗಳ-ತೂಗಿರೇ ದೀಪಗಳ’ ಸಾಂಸ್ಕೃತಿಕ ಕಾರ್ಯಕ್ರಮ ಅಕ್ಟೋಬರ್ 10ರ ಸಾಯಂಕಾಲ 6 ಗಂಟೆಗೆ ನರಗುಂದದ ಬೈನರಹಟ್ಟಿ ಶ್ರೀ ದೊರೆಸ್ವಾಮಿ ವಿರಕ್ತಮಠದ ಬಳಿಯ ಸರಕಾರಿ ಪ್ರೌಢಶಾಲೆ ಆವರಣದ ಬಳಿ ನಡೆಯಲಿದೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕನ್ನಡ ಮತ್ತು ಸಂಸ್ಕೃತಿ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ಎಸ್.ತಂಗಡಗಿ ಘನ ಉಪಸ್ಥಿತಿ ವಹಿಸುವರು. ಕಾನೂನು, ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ನರಗುಂದ ಶಾಸಕ ಸಿ.ಸಿ ಪಾಟೀಲ ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಡಾ. ವೆಂಕಟೇಶ ಎಂ.ವಿ, ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಶ್ರೀಮತಿ ಕೆ ಎಂ ಗಾಯತ್ರಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ, ಅಪರ ಜಿಲ್ಲಾಧಿಕಾರಿ ಡಾ. ದುರುಗೇಶ್ ಕೆ.ಆರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಳಗಾವಿ ಜಂಟಿ ನಿರ್ದೇಶಕ ಕೆ.ಎಚ್. ಚೆನ್ನೂರು, ಕರ್ನಾಟಕ ಜಾನಪದ ಅಕಾಡೆಮಿಯ ಶಂಕರಪ್ಪ ಆರ್.ಸಂಕಣ್ಣವರ, ಅರ್ಜುನ ಯ.ಗೊಳಸಂಗಿ, ಕರ್ನಾಟಕ ಬಂಜಾರ ಅಕಾಡೆಮಿಯ ಸಾವಿತ್ರಿ ಮ.ಲಮಾಣಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ಸರ್ವರಿಗೂ ಸ್ವಾಗತ ಕೋರಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ, ಸರ್ಕಾರಿ ಮುಖ್ಯ ಸಚೇತಕ ಹಾಗೂ ವಿ.ಪ ಸದಸ್ಯರಾದ ಸಲೀಂ ಅಹ್ಮದ್, ಕರ್ನಾಟಕ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್. ಪಾಟೀಲ, ಸಂಸದ ಪಿ.ಸಿ. ಗದ್ದಿಗೌಡರ, ವಿ.ಪ ಸದಸ್ಯರಾದ ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ್, ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ಬೈನರಹಟ್ಟಿ ಗ್ರಾ.ಪಂ ಅಧ್ಯಕ್ಷ ಶರಣಬಸಪ್ಪ ನರಸಾಪೂರ ಆಗಮಿಸುವರು.