HomeEntertainmentಗಾಯಕಿ ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು: ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ

ಗಾಯಕಿ ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು: ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ

For Dai;y Updates Join Our whatsapp Group

ಕನ್ನಡ ಕೋಗಿಲೆ ರಿಯಾಲಿಟಿ ಶೋ ಮೂಲಕ ಗುರುತಿಸಿಕೊಂಡ ಗಾಯಕಿ ಅಖಿಲಾ ಪಜಿಮಣ್ಣ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ. ಮೂರು ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಲು ಮುಂದಾಗಿರುವ ಜೋಡಿ ವಿಚ್ಛೇದನಕ್ಕಾಗಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

3 ವರ್ಷಗಳ ಹಿಂದೆ ಬೆಳಗಾವಿ ಮೂಲದ ಅಮೆರಿಕ ನಿವಾಸಿ  ಧನಂಜಯ್ ಶರ್ಮ ಅವರನ್ನು ಅಖಿಲಾ ಮಂಗಳೂರಿನಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದರು. ಮೂರು ವರ್ಷಗಳಿಂದ ಅನ್ಯೋನ್ಯವಾಗಿದ್ದ ಜೋಡಿ ಇದೀಗ ಏಕಾ ಏಕಿ ಡಿವೋರ್ಸ್‌ ಗೆ ಅರ್ಜಿ ಸಲ್ಲಿಸಿರುವುದು ಅವರ ಅಭಿಮಾನಿಗಳಿಗೆ ಶಾಕ್‌ ಆಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನವರಾದ ಅಖಿಲಾ ಕಿರುತೆರೆ ಹಾಗೂ ಸೋಶಿಯಲ್ ಮೀಡಿಯಾ ಮೂಲಕ ಸಾಕಷ್ಟು ಖ್ಯಾತಿ ಗಳಿಸಿದ್ದಾರೆ. ತಮ್ಮ ಗಾಯನದ ಮೂಲಕ ಕೋಟ್ಯಾಂತರ ಕನ್ನಡಿಗರ ಮನ ಸೆಳೆದ ಗಾಯಕಿ ಇದೀಗ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದು ಅಚ್ಚರಿಗೆ ಕಾರಣವಾಗಿದೆ.  ಪುತ್ತೂರಿನ ವಕೀಲ ಮಹೇಶ್ ಕಜೆ ಮೂಲಕ ಅರ್ಜಿ ಸಲ್ಲಿಸಿದ್ದಾರೆ.

ಅಖಿಲಾ ಪಜಿಮಣ್ಣು ಮತ್ತು ಧನಂಜಯ್ ಶರ್ಮಾ ನಡುವೆ ಮಧ್ಯಸ್ಥಿಕೆಗೆ ಕಳೆದ ಆರು ತಿಂಗಳಿಂದ ಕೋರ್ಟ್ ಅವಕಾಶ ನೀಡಿತ್ತು. ಅದರೆ ಇಬ್ಬರ ನಡುವೆ ಹೊಂದಾಣಿಕೆ ಬರದ ಕಾರಣ ಇದೀಗ ಇಬ್ಬರು ದೂರ ದೂರವಾಗಲು ನಿರ್ಧರಿಸಿದ್ದಾರೆ. ಹೀಗಾಗಿ ಬುಧವಾರ (ಜೂನ್ 18) ಈ ದಂಪತಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಮ್ಯೂಚುಯಲ್‌ ಡಿವೋರ್ಸ್ ಪಡೆಯಲು ಇಬ್ಬರೂ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img