ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಶ್ರೀ ವೀರನಾರಾಯಣ ಕಲ್ಯಾಣ ಮಂಟಪದಲ್ಲಿ ಶ್ರೀ ಸಿದ್ಧಿವಿನಾಯಕ ಪ್ರಸಾದಿತ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಹಟ್ಟಿಯಂಗಡಿ ಇವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಕವಿ ಬೇಳೂರು ವಿಷ್ಣುಮೂರ್ತಿ ನಾಯಕ್ ವಿರಚಿತ `ಸಿರಿಸಿಂಗಾರಿ ಭಾಗ್ಯದಂಬಾರಿ’ ಎಂಬ ಯಕ್ಷಗಾನವನ್ನು ಪ್ರದರ್ಶಿಸಿದರು.
ವಿ.ಆ. ವೀರಚಂದ್ರಹಾಸ ಚಲನಚಿತ್ರದ ಕಥಾನಾಯಕ ಶಿಥಿಲ್ ಶೆಟ್ಟಿ, ನಾಯಕ ನಟಿ ನಾಗಶ್ರೀ ಅಭಿನಯಿಸಿದ ಈ ಯಕ್ಷಗಾನವನ್ನು ಹೊಟೇಲ್ ಒಡೆಯರ ಸಂಘದ ಗದಗ ಜಿಲ್ಲಾಧ್ಯಕ್ಷ ವಿಶ್ವನಾಥ ಶೆಟ್ಟಿ ಉದ್ಘಾಟಿಸಿ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಹೊಟೇಲ್ ಒಡೆಯರ ಸಂಘದಿಂದ ಗದಗ ನಗರದಲ್ಲಿ ಕರಾವಳಿಯ ಪ್ರಸಿದ್ಧ ಯಕ್ಷಗಾನ ಕಲೆಯನ್ನು ಗದಗ ಜನತೆಗೆ ಪ್ರದರ್ಶಿಸಲು ಆಗಮಿಸಿದ ಈ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವೆ ಎಂದರು.
ಇದೇ ಸಂದರ್ಭದಲ್ಲಿ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕಾವೆಂಶ್ರೀರವರ ನಿಧನಕ್ಕೆ 2 ನಿಮಿಷ ಮೌನಾಚರಣೆ ಮಾಡಿ ಗೌರವ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಸುಧಾಕರ ಶೆಟ್ಟಿ, ರಂಜಿತ ಶೆಟ್ಟಿ, ಯು.ಬಿ. ಹುಬ್ಬಳ್ಳಿ, ಸುಕುಮಾರ ಶೆಟ್ಟಿ, ಜಯಪಾಲಶೆಟ್ಟಿ, ಶಿವಯ್ಯ ನಾಲ್ವಾತಡಮಠ, ನಾಗಶ್ರೀ ಜಿ.ಎಸ್., ಶಿಥಿಲ್ ಶೆಟ್ಟಿ, ಜಯದೇವ ಭಟ್ಟ ಸೇರಿದಂತೆ ಚೇಂಬರ್ ಆಫ್ ಕಾಮರ್ಸ್ ಅಸೋಸಿಯೇಶನ್ ಗದಗ, ಬಾರ್ ಅಸೋಸಿಯೇಶನ್ ಗದಗ, ರೋಟರಿ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.