ಬೆಂಗಳೂರು:- ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‍ಐಟಿ ರಚಿಸಿ ಆದೇಶ ಹೊರಡಿಸಿದೆ.
Advertisement
ಹಿರಿಯ ಐಪಿಎಸ್ ಅಧಿಕಾರಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ಎಸ್‍ಐಟಿ ರಚನೆ ಮಾಡಲಾಗಿದೆ. ತನಿಖಾ ತಂಡದಲ್ಲಿ ಐಪಿಎಸ್ ಅಧಿಕಾರಿಗಳಾದ ಅನುಚೇತ್, ಸೌಮ್ಯಲತಾ ಮತ್ತು ಜಿತೇಂದ್ರ ಕುಮಾರ್ ದಯಾಮಾ ಇರಲಿದ್ದಾರೆ.
ಡಿಜಿಐಜಿಪಿಗೆ ತನಿಖಾ ಹಂತದ ಮಾಹಿತಿ ಆಗಿಂದಾಗ ಕೊಡಬೇಕು. ತನಿಖೆಯ ಅಂತಿಮ ವರದಿಯನ್ನು ಶೀಘ್ರವಾಗಿ ಸರ್ಕಾರಕ್ಕೆ ಸಲ್ಲಿಸಬೇಕೆಂದು ಎಸ್‍ಐಟಿ ತಂಡಕ್ಕೆ ಸರ್ಕಾರ ಸೂಚಿಸಿದೆ.
ಇನ್ನೂ ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ, ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳು ಹಾಗೂ ಶವಗಳನ್ನ ಹೂತಿಟ್ಟ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ.