ಬೆಂಗಳೂರು: ಧರ್ಮಸ್ಥಳ ಪ್ರಕರಣಗಳ ತನಿಖೆಗೆ ಎಸ್ಐಟಿ ರಚನೆ ಮಾಡಲಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,
ಅದರ ಬಗ್ಗೆ ಮಾಹಿತಿ ತಿಳಿಯಬೇಕು. ಹೋಂ ಮಿನಿಸ್ಟರ್ ಹ್ಯಾಂಡಲ್ ಮಾಡ್ತಿದ್ದಾರೆ. ಹಿರಿಯ ಅಧಿಕಾರಿಗಳಿಗೆ ತನಿಖೆಗೆ ಕೊಟ್ಟಿದ್ದಾರೆ. ಅವರು ತನಿಖೆಯನ್ನು ಮಾಡ್ತಾರೆ. ಬಿಜೆಪಿಯವರು ಏನು ಬೇಕಾದರೂ ಹೇಳಲಿ. ಕೋರ್ಟ್ಗೆ ಯಾರೋ ಹೇಳಿಕೆ ಕೊಟ್ಟಿದ್ದರು.
ಅದರ ಆಧಾರದ ಮೇಲೆ ತನಿಖೆ ಆಗ್ತಿದೆ. ಸತ್ಯಾಸತ್ಯತೆ ಏನು ಅನ್ನೋದು ಬರುತ್ತದೆ. ಮೀಡಿಯಾದವರು ದೊಡ್ಡದಾಗಿ ಮಾಡ್ತಿದ್ದೀರ. ನಿಮಗೂ ಗೌರವ ಕೊಡಬೇಕಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮಗಿಂತ ನಿಮ್ಮದೂ ಜವಾಬ್ದಾರಿ ಹೆಚ್ಚಿದೆ. ನಿಮ್ಮ ಮಾತು ಗೌರವಿಸಬೇಕು. ನಿಮ್ಮ ಹಿತವಚನವನ್ನು ಕೇಳಬೇಕಲ್ಲ ಎಂದರು.



