ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ಎಸ್ಐಟಿ ಅಧಿಕಾರಿಗಳು ದಾಳಿ

0
Spread the love

ಬೆಂಗಳೂರು: ಜಾತಿ ನಿಂದನೆ, ಬೆದರಿಕೆ ಹಾಕಿದ ಪ್ರಕರಣದ ಬಳಿಕ RR ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅ*ತ್ಯಾಚಾರ ಆರೋಪದಲ್ಲಿ ಬಂಧಿಸಲಾಗಿದೆ. ಮುನಿರತ್ನ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಬೆಳಗ್ಗೆ ದಾಳಿ ನಡೆಸಿದರು. ಬೆಂಗಳೂರಿನ ವೈಯಾಲಿಕಾವಲ್ ನಿವಾಸದ ಮೇಲೆ ಎಸ್​ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸಿದೆ.

Advertisement

ಸದ್ಯ ಮೂರು ಕೇಸ್​ಗಳ ಸಂಬಂಧ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ವೈಯಾಲಿಕಾವಲ್ ನಿವಾಸ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಎಸ್​ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಫ್​ಎಸ್​​ಎಲ್ ತಂಡದ ಜತೆಗೇ ಎಸ್​ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

 


Spread the love

LEAVE A REPLY

Please enter your comment!
Please enter your name here