ಮೈಸೂರು: ಕೊರೋನಾ ಸೋಂಕು ವಿಚಾರ ಹರಡಿದ ಬೆನ್ನೆಲ್ಲೇ ಮೈಸೂರು ಜಿಲ್ಲೆಯಲ್ಲಿ ಆರು ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ.
Advertisement
ವಿವಿಧ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಆರು ಮಂದಿ ರೋಗಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ ಪಿ ಸಿ ಕುಮಾರಸ್ವಾಮಿ ಹೇಳಿದ್ದಾರೆ.
ಯಾವುದೇ ಟ್ರಾವಲ್ ಹಿಸ್ಟರಿ ಇಲ್ಲದಿದ್ದರೂ ಕೋವಿಡ್ ಟೆಸ್ಟ್ ಮಾಡಿದಾಗ ಸೋಂಕು ಪತ್ತೆಯಾಗಿದೆ. ಐದು ಮಂದಿ 60 ವರ್ಷ ಮೇಲ್ಪಟ್ಟವರಾಗಿದ್ದು, 48 ವರ್ಷದ ಓರ್ವರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.
ಸೋಂಕು ಪತ್ತೆಯಾದ ಎಲ್ಲಾ ಆರು ಮಂದಿಗೂ ತುರ್ತು ನಿಗಾ ಘಟಕದಲ್ಲಿರಿಸಿ ಅಗತ್ಯ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿಸಿದ್ದಾರೆ.