ಅಪಾರ್ಟ್ಮೆಂಟ್ ನಲ್ಲಿ ಅಸ್ಥಿಪಂಜರ ಪತ್ತೆ: ಮನುಷ್ಯರದ್ದೋ? ಪ್ರಾಣಿಯದ್ದೋ? – ಪೊಲೀಸರಿಂದ ತನಿಖೆ ಚುರುಕು!

0
Spread the love

ಬೆಂಗಳೂರು: ನಗರದ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್ಮೆಂಟ್ ಒಂದರಲ್ಲಿ ನಾಲ್ಕೈದು ಪೀಸ್ ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ಜರುಗಿದೆ.

Advertisement

ನಗರದ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ 2 ದಿನದ ಹಿಂದೆ ಇಂಗುಗುಂಡಿ ಸ್ಚಚ್ಛ ಮಾಡುವಾಗ ಅಸ್ಥಿಪಂಜರ ಪತ್ತೆಯಾಗಿದ್ದು, ಕೂಡಲೇ ಮಾಹಿತಿ ಆಧರಿಸಿ ಸ್ಥಳಕ್ಕೆ ಬೇಗೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಅಸ್ಥಿಪಂಜರ ಪೀಸ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪತ್ತೆಯಾದ ಅಸ್ಥಿಪಂಜರ ಪೀಸ್ ಗಳನ್ನು FSLಗೆ ರವಾನೆ ಮಾಡಲಾಗಿದೆ.

ಘಟನೆ ಸಂಬಂಧ ಯುಡಿಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವ ಪೊಲೀಸರು, ಅಸ್ಥಿಪಂಜರ ಮನುಷ್ಯರದ್ದಾ..? ಪ್ರಾಣಿಯದ್ದಾ? ಎಂದು ಪರಿಶೀಲನೆ ಮಾಡಲಾಗುತ್ತಿದ್ದು, ವರದಿಗಾಗಿ ಕಾಯುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here