ನವದೆಹಲಿ: ಬಿಜೆಪಿಯವರು ತಾಕತ್ತಿದ್ದರೆ ಆರ್‌ಎಸ್‌ಎಸ್ ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಸವಾಲು ಹಾಕಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಸಿಡಬ್ಲ್ಯುಸಿ ನಿರ್ಣಯವನ್ನು ಸ್ವಾಗತಿಸುವುದಾಗಿ ಹೇಳಿದ ಹರಿಪ್ರಸಾದ್, ಇವರು ತಮ್ಮನ್ನು ಗಲ್ಲಿಗಾದರೂ ಹಾಕಲಿ, ಜೈಲಿಗಾದರೂ ಹಾಕಲಿ, ತಾವು ಹಾಡುವುದು ವಂದೇ ಮಾತರಂ ಗೀತೆಯ ಎರಡು ಚರಣ ಮಾತ್ರ ಎಂದು ಪುನರುಚ್ಚರಿಸಿದರು. ಈ ವಿಚಾರದಲ್ಲಿ ರಾಜಕೀಯ ಮಾಡುವವರೇ ದೇಶದ್ರೋಹಿಗಳು ಎಂದು ಆರೋಪಿಸಿದ ಅವರು, ಸಿಡಬ್ಲ್ಯುಸಿ ಸಭೆಯಲ್ಲಿ ಸರಿಯಾದ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಅಭಿಪ್ರಾಯಪಟ್ಟರು.
ಇವರೆಲ್ಲ ಕಂಗನಾ ರಣಾವತ್ ಅಭಿಮಾನಿಗಳು ಎಂದು ವ್ಯಂಗ್ಯವಾಡಿದ ಹರಿಪ್ರಸಾದ್, ಕಂಗನಾ ಹಾಡನ್ನೇ ಬೇಕಿದ್ದರೆ ಸಂಸತ್ತಿಗೆ ತಂದು ರಾಷ್ಟ್ರಗೀತೆ ಮಾಡುತ್ತಾರೆ ಎಂದು ಟೀಕಿಸಿದರು. ಬಿಜೆಪಿಯವರು ಪಾರ್ಲಿಮೆಂಟ್‌ಗೆ ಬರುವ ಧೈರ್ಯವೂ ಇಲ್ಲದ ನರಹೇಡಿಗಳು ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.



