ಕೋಲಾರ:- ಕೋಲಾರ ಹೊರವಲಯದ ಕೊಂಡರಾಜನಹಳ್ಳಿಯಲ್ಲಿ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿ ಡಿಕ್ಕಿಯಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕೈವಾಕ್ ಮುರಿದು ಬಿದ್ದ ಪರಿಣಾಮ ಕಾರು ಜಖಂಗೊಂಡ ಘಟನೆ ಜರುಗಿದೆ.
ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಿಲ್ಲ. ಸ್ಥಳಕ್ಕೆ ಆಗಮಿಸಿದ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಬೃಹತ್ ಎರಡು ಕ್ರೇನ್‌ಗಳನ್ನು ಬಳಸಿ ತೆರವು ಕಾರ್ಯ ಮಾಡಲಾಗಿದೆ. ಸ್ಕೈವಾಕ್ ಪಿಲ್ಲರ್‌ಗೆ ಲಾರಿ ಡಿಕ್ಕಿಯಾದ ಪರಿಣಾಮ ಸ್ಕೈವಾಕ್ ಮುರಿದು ಬಿದ್ದಿದೆ.
ಸತತ ನಾಲ್ಕೈದು ಗಂಟೆಗಳ ಕಾರ್ಯಾಚರಣೆ ಬಳಿಕ ಮುರಿದು ಬಿದ್ದಿದ್ದ ಸ್ಕೈವಾಕ್ ತೆರವುಗೊಳಿಸಲಾಗಿದೆ. ಘಟನೆಯಿಂದ ಚೆನೈ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿ ವಾಹನ ಸವಾರರು ಪರದಾಡುವಂತಾಯಿತು.



