ಬೆಳ್ತಂಗಡಿ: ಧರ್ಮಸ್ಥಳದ ವಿರುದ್ಧದ ಅಪಪ್ರಚಾರ ಮತ್ತು ಷಡ್ಯಂತ್ರದ ಕುರಿತು ಎಸ್ಐಟಿ ತನಿಖೆಯು ದಾರಿ ತಪ್ಪಿದ್ದು, ಪ್ರಕರಣವನ್ನು ಎನ್ಐಎಗೆ ವಹಿಸುವಂತೆ ಒತ್ತಾಯಿಸಿ ಬಿಜೆಪಿ ವತಿಯಿಂದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಇಂದು ಧಮ೯ಸ್ಥಳ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
Advertisement
ಇನ್ನೂ ಧರ್ಮಸ್ಥಳದ ಚಲೋ ಯಾತ್ರೆಗೆ ತೆರಳಿರುವ ಬಿಜೆಪಿ ನಾಯಕರು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿವೈವಿ, ಧರ್ಮಸ್ಥಳ ಪ್ರಕರಣದ ಹಿಂದೆ ಇರುವ ದುಷ್ಟ ಶಕ್ತಿಗಳು ಬಹಿರಂಗ ಆಗಬೇಕು.
ಹಿಂದೂ ಸಮಾಜವನ್ನ ರಕ್ಷಣೆ ಮಾಡುವಂತಹ ಕೆಲಸ ಆಗಬೇಕು. ಈಗ ಎಸ್‍ಐಟಿಯವರು ಬಂಧಿಸಿರುವುದು ಸಣ್ಣ ಪುಟ್ಟವರು. ಇದರ ಹಿಂದೆ ಬಲಾಢ್ಯರು ಇದ್ದಾರೆ. ಅವರನ್ನ ಹೊರೆಗೆ ತೆಗೆಯುವಂತಹ ಕೆಲಸ ಆಗಬೇಕು ಇದಕ್ಕೆ ಎನ್‌ಐಎ ತನಿಖೆ ಅಗತ್ಯ ಎಂದರು.