ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಗದಗ ಇವುಗಳ ಸಹಯೋಗದಲ್ಲಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಬಾಲ್ಯವಿವಾಹ, ಪೊಕ್ಸೋ, ಆರ್.ಟಿ.ಇ ಕಾಯ್ದೆ ಕುರಿತು ಅರಿವು ಕಾರ್ಯಕ್ರಮವನ್ನು ಗಜೇಂದ್ರಗಡದ ಎಸ್.ಎಮ್. ಭೂಮರಡ್ಡಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕ್ಕೊಳ್ಳಲಾಗಿತ್ತು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ರಾಮತ್ನಾಳ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಜಿ.ಬಿ. ಗುಡಿಮನಿ ವಹಿಸಿದ್ದರು. ಮಂಜುನಾಥ ಅಸೂಟಿ ಬಾಲ್ಯ ವಿವಾಹ ನಿಷೇಧ, ಫೋಕ್ಸೋ ಕಾಯ್ದೆ ಕುರಿತು ಹಾಗೂ ಶ್ರೀಧರ ಅವರು ಮಾನಸಿಕ ಆರೋಗ್ಯದ ಕುರಿತು ಉಪನ್ಯಾಸ ನೀಡಿದರು.
ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್. ಬಿ. ಮಸನಾಯಕ್, ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಫೀಕಾ ಹಳ್ಳೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಎ.ಎಸ್. ವಡ್ಡರ್ ಸ್ವಾಗತಿಸಿದರು. ಕಾಲೇಜಿನ ಉಪನ್ಯಾಸಕ ಬಿ.ಎಂ. ಜೂಚನಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.