SM ಕೃಷ್ಣ ನಿಧನ: ನಾಳೆ ಹುಟ್ಟೂರಲ್ಲಿ ಅಂತ್ಯಕ್ರಿಯೆ, CM ಸಿದ್ದರಾಮಯ್ಯ ಸೇರಿ ಹಲವರಿಂದ ಸಂತಾಪ!

0
Spread the love

ಬೆಂಗಳೂರು:- ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಹಲವು ರಾಜಕೀಯ ಗಣ್ಯರಿಂದ ಸಂತಾಪ ಸೂಚಿಸಲಾಗಿದೆ.

Advertisement

ಈ ಸಂಬಂಧ X ಮಾಡಿರುವ CM ಸಿದ್ದರಾಮಯ್ಯ, ಎಸ್.ಎಂ.ಕೃಷ್ಣ ಅವರ ಸಾವಿನಿಂದ ನಾನು ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ. ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ‌ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು ಎಂದು ಅವರು ಹೇಳಿಕೊಂಡಿದ್ದಾರೆ.

ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ ಭಾಗಿಯಾಗಿದ್ದೇನೆ.‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದು ಎಸ್ ಎಂ ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಅದರಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಕೂಡ, ರಾಜ್ಯ ಕಂಡ ಶ್ರೇಷ್ಠ ರಾಜಕಾರಣಿ ,ಧಕ್ಷ ಆಡಳಿತಗಾರ, ಚಿಂತಕ ಅಭಿವೃದ್ದಿಯ ಹರಿಕಾರ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ನಿಧನ ಅತೀವ ದುಃಖ ತಂದಿದೆ ಎಂದು ಕಂಬನಿ ಮಿಡಿದಿದ್ದಾರೆ.

ಇನ್ನೂ ನಿಧನರಾದ ಮಾಜಿ ಸಿಎಂ ಎಸ್‌ಎಂ ಕೃಷ್ಣ ಅವರ ಅಂತ್ಯಕ್ರಿಯೆಯ ನಾಳೆ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಡೆಯಲಿದೆ ಎಂದು ದೀರ್ಘಕಾಲದ ಒಡನಾಡಿಗಳು, ಸಂಬಂಧಿ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್‌ ಮಾಧ್ಯಮ ಹೇಳಿಕೆಯ ಮೂಲಕ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here