ಬೆಂಗಳೂರು: ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.
Advertisement
ನಗರದಲ್ಲಿ ಮಾತನಾಡಿದ ಅವರು, ಕರ್ನಾಟಕ ವಿಧಾನಸಭೆಯ ಸ್ಪೀಕರ್, ಮುಖ್ಯಮಂತ್ರಿ, ಕೇಂದ್ರ ದ ಸಚಿವ, ಮಹಾರಾಷ್ಟ್ರ ರಾಜ್ಯಪಾಲ ಸೇರಿದಂತೆ ಹಲವು ಹುದ್ದೆ ಅಲಂಕರಿಸಿದ್ದ ಎಸ್.ಎಂ.ಕೃಷ್ಣ ಅವರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅಪಾರ ಅನುಭವ ಹೊಂದಿದ್ದ ದೇಶ ಕಂಡ ಮುತ್ಸದ್ದಿ ರಾಜಕಾರಣಿ ಆಗಿದ್ದ ಅವರ ಅಗಲಿಕೆ ಯಿಂದ ದೇಶಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಸಚಿವರು ತಿಳಿಸಿದ್ದಾರೆ.