SM Krishna: ಸೋಮನಹಳ್ಳಿ ಕಾಫಿ ಡೇ ಆವರಣದಲ್ಲಿ ಇಂದು ಎಸ್ಎಂ ಕೃಷ್ಣ ಅಂತ್ಯಕ್ರಿಯೆ

0
Spread the love

ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿಹಾಗೂ ಹಿರಿಯ ರಾಜಕಾರಣಿ ಎಸ್ಎಂಕೃಷ್ಣ  ನಿಧನರಾಗಿದ್ದಾರೆ.  ಇಂದು ಇವರ ಅಂತ್ಯಕ್ರಿಯೆ ನಡೆಯಲಿದ್ದು,  ಕೃಷ್ಣ ಪಾರ್ಥಿವ ಶರೀರವನ್ನು ಮದ್ದೂರಿಗೆ ಕೊಂಡೊಯ್ಯಲಾಗುತ್ತದೆ. ಮಾರ್ಗಮಧ್ಯೆ ಕೆಂಗೇರಿ, ರಾಮನಗರ, ಚನ್ನಪಟ್ಟಣದಲ್ಲಿ ಕೆಲಹೊತ್ತು ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.

Advertisement

ಸಂಜೆ 3 ಗಂಟೆ ಸುಮಾರಿಗೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಲಿದೆ. ಸಿಎಂ ಸಿದ್ದರಾಮಯ್ಯ, ಸಚಿವರು, ಕೇಂದ್ರದ ಪರವಾಗಿ ಪ್ರಹ್ಲಾದ್‌ ಜೋಶಿ, ಕುಮಾರಸ್ವಾಮಿ ಸೇರಿ ರಾಜಕೀಯ ಗಣ್ಯರು, ಸ್ವಾಮೀಜಿಗಳು, ಅಪಾರ ಅಭಿಮಾನಿಗಳು ಭಾಗವಹಿಸಲಿದ್ದಾರೆ. ಇಂದು ಅಗತ್ಯ ತಯಾರಿಗಳು ನಡೆದಿವೆ. ಡಿಸಿಎಂ ಶಿವಕುಮಾರ್‌ ಸೇರಿ ಪ್ರಮುಖರು ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.

ಸೋಮನಹಳ್ಳಿಗೆ 10 ಗಂಟೆ ಬರಲಿರುವ ಕೃಷ್ಣರ ಪಾರ್ಥಿವ ಶರೀರವನ್ನು ಕಾಫಿ ಡೇ ಆವರಣದಲ್ಲಿ ಇಡಲಾಗುತ್ತದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಒಕ್ಕಲಿಗ ಸಂಪ್ರದಾಯದಂತೆ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ 15 ಕ್ಕೂ ಹೆಚ್ಚು ವೈದಿಕರಿಂದ ವಿಧಿ ವಿಧಾನ ಕಾರ್ಯಗಳು ನಡೆಯಲಿದೆ. ಗಂಧದ ಕಟ್ಟಿಗೆಳಿಂದ ಮೃತ ದೇಹವನ್ನು ಸುಡುವ ಮೂಲಕ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ.


Spread the love

LEAVE A REPLY

Please enter your comment!
Please enter your name here