HomeGadag Newsಸಮಾಜಮುಖಿ ವ್ಯಕ್ತಿಗಳು ಸದಾ ಸ್ಮರಣೀಯರು: ಎಸ್.ವಿ. ಸಂಕನೂರ

ಸಮಾಜಮುಖಿ ವ್ಯಕ್ತಿಗಳು ಸದಾ ಸ್ಮರಣೀಯರು: ಎಸ್.ವಿ. ಸಂಕನೂರ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ವ್ಯಕ್ತಿಯ ಬದುಕಿನ ಅವಧಿಗಿಂತ ಸಮಾಜಕ್ಕಾಗಿ ಮಾಡಿದ ಕಾರ್ಯಗಳೇ ಅವರನ್ನು ಸದಾ ಸ್ಮರಣೀಯರನ್ನಾಗಿಸುತ್ತವೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಿವಾನಂದ ಗಿಡ್ನಂದಿ ಅವರ ಸಂಸ್ಮರಣ ಗ್ರಂಥ ‘ಸದಾಶಿವಾನಂದ’ ಕೃತಿಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಶಿಕ್ಷಕರಾಗಿದ್ದ ಶಿವಾನಂದ ಗಿಡ್ನಂದಿ ಅವರು ಬೋಧನೆಯ ಜೊತೆಗೆ ಸಾಹಿತ್ಯ, ಸಂಸ್ಕೃತಿ ಮತ್ತು ಸಂಘಟನಾ ಕ್ಷೇತ್ರಗಳಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಕವಿಯಾಗಿ, ಸಂಘಟಕರಾಗಿ ಹಾಗೂ ಉತ್ತಮ ಬೋಧಕರಾಗಿ ಗದಗದ ಸಾಂಸ್ಕೃತಿಕ ಶ್ರೀಮಂತಿಕೆಗೆ ತಮ್ಮದೇ ಆದ ಕಾಣಿಕೆ ಸಲ್ಲಿಸಿದ್ದಾರೆ ಎಂದು ಸ್ಮರಿಸಿದರು.

ಮಾಜಿ ಸಚಿವ ಎಸ್.ಎಸ್. ಪಾಟೀಲ ಮಾತನಾಡಿ, ಶಿಕ್ಷಕರು ಕೇವಲ ಪಾಠ ಬೋಧನೆಗೆ ಸೀಮಿತರಾಗದೆ ಸಮಾಜ ಮತ್ತು ಸಂಸ್ಕೃತಿಯ ಬೆಳವಣಿಗೆಯಲ್ಲೂ ಪಾತ್ರ ವಹಿಸಬೇಕು. ಶಿವಾನಂದ ಗಿಡ್ನಂದಿ ಅವರು ಉತ್ತಮ ಶಿಕ್ಷಕ, ಸಾಹಿತಿ ಹಾಗೂ ಸಂಘಟಕರಾಗಿ ಸಮಾಜಕ್ಕೆ ಮಾದರಿಯಾಗಿದ್ದರು ಎಂದರು.

ಪ್ರೊ. ಚಂದ್ರಶೇಖರ ವಸ್ತ್ರದ ಮಾತನಾಡಿ, ಗಿಡ್ನಂದಿ ಅವರು ಉತ್ತಮ ವಾಗ್ಮಿ, ನಿರೂಪಕ ಹಾಗೂ ಕವಿಯಾಗಿದ್ದು ಸಾಹಿತ್ಯ ವಲಯದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದರು ಎಂದು ಹೇಳಿದರು.

ಗ್ರಂಥವನ್ನು ಪರಿಚಯಿಸಿದ ಡಾ. ಎಚ್.ಬಿ. ಪೂಜಾರ ಅವರು, ಈ ಕೃತಿಯಲ್ಲಿ ಶಿವಾನಂದ ಗಿಡ್ನಂದಿ ಅವರ ವ್ಯಕ್ತಿತ್ವ, ಸಾಹಿತ್ಯ ಸಾಧನೆ, ಕವಿತೆಗಳು ಹಾಗೂ ಲೇಖನಗಳನ್ನು ಒಳಗೊಂಡ ಸಮಗ್ರ ಚಿತ್ರಣ ನೀಡಲಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಮಾತನಾಡಿ, ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ಗಿಡ್ನಂದಿ ಅವರು ನೀಡಿದ ಕೊಡುಗೆ ಅಪಾರವಾಗಿದ್ದು, ಅವರ ಸೇವಾ ಪರಂಪರೆಯನ್ನು ಕುಟುಂಬ ಮುಂದುವರಿಸಿಕೊಂಡು ಹೋಗುತ್ತಿರುವುದು ಸಂತಸದ ಸಂಗತಿ ಎಂದರು.

ಸಾನ್ನಿಧ್ಯ ವಹಿಸಿದ್ದ ಭೈರನಹಟ್ಟಿ ದೊರೆಸ್ವಾಮಿಮಠದ ಶಾಂತಲಿಂಗ ಮಹಾಸ್ವಾಮಿಗಳು ಮಾತನಾಡಿ, ಸಾಹಿತ್ಯ ಪರಿಷತ್ತಿನಲ್ಲಿ ಗಿಡ್ನಂದಿ ಅವರು ಸಲ್ಲಿಸಿದ ಸೇವೆ ಅವಿಸ್ಮರಣೀಯವಾಗಿದ್ದು, ಅವರ ಜೀವನ ಸಾಧನೆಯನ್ನು ದಾಖಲಿಸುವ ಈ ಗ್ರಂಥ ಮುಂದಿನ ಪೀಳಿಗೆಗೆ ದಾರಿದೀಪವಾಗಲಿ ಎಂದು ಆಶಿಸಿದರು.

ನಿವೃತ್ತ ಉಪನ್ಯಾಸಕ ಎಸ್.ಜಿ. ಕಡೇಮನಿ ಮಾತನಾಡಿ, ಶಿವಾನಂದ ಗಿಡ್ನಂದಿ ಅವರು ಶಿಕ್ಷಣ, ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ಬಹುಮುಖ ಪ್ರತಿಭೆಯಾಗಿದ್ದರು ಎಂದು ಹೇಳಿದರು.

ವೇದಿಕೆಯಲ್ಲಿ ಮಹಾದೇವಪ್ಪ ಕಡೇಮನಿ, ಶಕುಂತಲಾ ಗಿಡ್ನಂದಿ ಉಪಸ್ಥಿತರಿದ್ದರು. ಮಂಜುಳಾ ವೆಂಕಟೇಶಯ್ಯ ಕವನ ವಾಚಿಸಿದರು. ಡಾ. ದತ್ತಪ್ರಸನ್ನ ಪಾಟೀಲ ನಿರೂಪಿಸಿದರು. ರಾಹುಲ ಗಿಡ್ನಂದಿ ಸ್ವಾಗತಿಸಿದರು. ರಕ್ಷಿತಾ ಗಿಡ್ನಂದಿ ವಂದಿಸಿದರು.

“ಬದುಕಿರುವ ಅವಧಿಗಿಂತ ಸಮಾಜಕ್ಕಾಗಿ ಮಾಡಿದ ಕಾರ್ಯಗಳೇ ವ್ಯಕ್ತಿಯನ್ನು ಸದಾ ಸ್ಮರಣೀಯರನ್ನಾಗಿಸುತ್ತವೆ.”

ಎಸ್.ವಿ. ಸಂಕನೂರ, ವಿಧಾನ ಪರಿಷತ್ ಸದಸ್ಯ


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!