ತುಮಕೂರು:- ನೀರಲ್ಲಿ ಸೋಡಿಯಂ ಬ್ಲಾಸ್ಟ್ ಗೆ ಸಂಬಧಪಟ್ಟಂತೆ ಡ್ರೋನ್ ಪ್ರತಾಪ್‌ನ ಇಬ್ಬರು ಗೆಳೆಯರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
Advertisement
ವಿನಯ್, ಪ್ರಜ್ವಲ್ ಬಂಧಿತರು, ಇಬ್ಬರಲ್ಲಿ ವಿನಯ್ ಎಂಬಾತ ಕ್ಯಾಮೆರಾ ಮ್ಯಾನ್ ಕೆಲಸ ಮಾಡಿದ್ರೆ, ಮತ್ತೋರ್ವ ಸೋಡಿಯಂ ಕೊಡಿಸಿದ್ದ ಎನ್ನಲಾಗಿದೆ.
ಡ್ರೋನ್ ಪ್ರತಾಪ್ ಬೆಂಗಳೂರಿನ ಅವೆನ್ಯೂ ರಸ್ತೆಯ ಅಂಗಡಿಯೊಂದರಲ್ಲಿ ಸೋಡಿಯಂ ಖರೀದಿಸಿದ್ದ. ಈ ಹಿನ್ನೆಲೆ ಸ್ಥಳ ಮಹಜರು ನಡೆಸಿದ ಪೊಲೀಸರು ಶನಿವಾರ ಮಧ್ಯರಾತ್ರಿ ಬೆಂಗಳೂರಿನಲ್ಲಿ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ.
ಇನ್ನೋರ್ವ ಸದ್ಯ ಎಸ್ಕೇಪ್ ಆಗಿದ್ದು, ಆತನಿಗಾಗಿ ಪೊಲೀಸರು ಶೋಧ ಕೈಗೊಂಡಿದ್ದಾರೆ. ಇನ್ನು ಡ್ರೋನ್ ಪ್ರತಾಪ್‌ನನ್ನು ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಪ್ರಕರಣ ಸಂಬಂಧ ಡ್ರೋನ್ ಪ್ರತಾಪ್, ಜಮೀನಿನ ಮಾಲೀಕ ಸೇರಿದಂತೆ ಮೂವರ ಮೇಲೆ ಎಫ್‌ಐಆರ್ ದಾಖಲಾಗಿದೆ.