HomeKarnataka Newsಅಡುಗೆ ಅನಿಲದ ಕೊರತೆಯಿಂದ ಕೆಲ ಹೋಟೆಲ್‌ಗಳು ತಾತ್ಕಾಲಿಕ ಬಂದ್: KH ಮುನಿಯಪ್ಪ

ಅಡುಗೆ ಅನಿಲದ ಕೊರತೆಯಿಂದ ಕೆಲ ಹೋಟೆಲ್‌ಗಳು ತಾತ್ಕಾಲಿಕ ಬಂದ್: KH ಮುನಿಯಪ್ಪ

For Dai;y Updates Join Our whatsapp Group

ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ 1 ಸಿಲಿಂಡರ್ ಕೊಡಲಾಗುತ್ತಿದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ KH ಮುನಿಯಪ್ಪ ಹೇಳಿದ್ದಾರೆ.

ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೋಟೆಲ್‌ಗಳಿಗೆ ಹೆಚ್ಚುವರಿ ಅಡುಗೆ ಅನಿಲ ನೀಡುವ ವಿಚಾರ ಮಂಗಳವಾರ ನಡೆಯುವ ಸಭೆಯಲ್ಲಿ ಚರ್ಚೆ ನಡೆಯಲಿದೆ. ಅಡುಗೆ ಅನಿಲದ ಕೊರತೆಯಿಂದ ಕೆಲ ಹೋಟೆಲ್‌ಗಳು ತಾತ್ಕಾಲಿಕವಾಗಿ ಬಂದ್ ಆಗಿದೆ. ಹೋಟೆಲ್‌ಗಳಿಗೆ ಈಗಾಗಲೇ 20% ಪ್ರಮಾಣದಲ್ಲಿ ಅನಿಲ ಹಂಚಿಕೆ ಆಗುತ್ತಿದೆ, ಹಾಸ್ಪಿಟಲ್‌ಗಳಿಗೆ 100% ಲಭ್ಯವಾಗಿದೆ ಎಂದು ಸ್ಪಷ್ಟಪಡಿಸಿದರು. ಮಂಗಳವಾರ ನಿರ್ಧಾರಾತ್ಮಕ ಸಭೆ ನಡೆಯಲಿದ್ದು, ಅದರಲ್ಲಿ ಹೋಟೆಲ್‌ಗಳಿಗೆ ಹೆಚ್ಚುವರಿ ಸಿಲಿಂಡರ್‌ ನೀಡುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.

ಡೊಮೆಸ್ಟಿಕ್ ಗ್ರಾಹಕರಿಗೆ ನಗರದಲ್ಲಿ 25 ದಿನಕ್ಕೆ 1 ಸಿಲಿಂಡರ್, ಹಳ್ಳಿಗಳಲ್ಲಿ 45 ದಿನಕ್ಕೆ 1 ಸಿಲಿಂಡರ್ ನೀಡಲಾಗುತ್ತಿದೆ. ವಾಣಿಜ್ಯ ಸಿಲಿಂಡರ್‌ ಸಮಸ್ಯೆ ಪರಿಹರಿಸುವಂತೆ ನಿರ್ದೇಶನ ನೀಡಲಾಗಿದೆ. ಈ ಸಂದರ್ಭದಲ್ಲಿ, ಬಂಕ್‌ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳದ ವಿಚಾರವೂ ಚರ್ಚೆಗೆ ಒಳಪಡಿಸಲಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img