ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಸಮೀಪದ ಕೋಟುಮಚಗಿಯ ಶ್ರೀ ಸೋಮೇಶ್ವರ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ಫಲಿತಾಂಶವು ಶೇ. 66.6ರಷ್ಟಾಗಿದೆ ಎಂದು ಮುಖ್ಯ ಶಿಕ್ಷಕಿ ವಿ.ಎಸ್. ಚಲವಾದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರೀಕ್ಷೆಗೆ ಕುಳಿತ 36 ವಿದ್ಯಾರ್ಥಿಗಳಲ್ಲಿ 3 ವಿದ್ಯಾರ್ಥಿನಿಯರು ಡಿಸ್ಟಿಂಕ್ಷನ್‌ನಲ್ಲಿ, 9 ವಿದ್ಯಾರ್ಥಿಗಳು ಪ್ರಥಮ ವರ್ಗದಲ್ಲಿ ಮತ್ತು 12 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ತಸ್ಲೀಮಾ ನದಾಫ್ ಶೇ. 95.52 ಅಂಕಗಳೊಂದಿಗೆ ಪ್ರಥಮ ಸ್ಥಾನ, ಅಂಬಿಕಾ ಮಾಲಿಪಾಟೀಲ ಮತ್ತು ಲಕ್ಷ್ಮೀ ಅಕ್ಕಿ ಶೇ. 87.2 ಅಂಕಗಳೊಂದಿಗೆ ದ್ವಿತೀಯ ಸ್ಥಾನ, ತಸ್ಲೀಮಾ ನದಾಫ್ ಕೋಟುಮಚಗಿ ಪರೀಕ್ಷಾ ಕೇಂದ್ರಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ.



