HomeCrime Newsಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ BJP ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ!

ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ BJP ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ!

For Dai;y Updates Join Our whatsapp Group

Spread the love

ತುಮಕೂರು: ಡೆತ್ ನೋಟ್ ಬರೆದಿಟ್ಟು ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ನೇಣಿಗೆ ಶರಣಾಗಿರುವ ಘಟನೆ ತುಮಕೂರು ನಗರದ ವಿಜಯನಗರದ 2ನೇ ಮುಖ್ಯ ರಸ್ತೆಯಲ್ಲಿ ನಡೆದಿದೆ. ತ್ರಿಶಾಲ್ (13), ಮೃತ ದುರ್ದೈವಿಯಾಗಿದ್ದು, ನಗರದ ಸರ್ವೊದಯ ಸ್ಕೂಲ್ ನಲ್ಲಿ 7ನೇ ತರಗತಿ ಓದುತ್ತಿದ್ದನು.

ತನ್ನ ತಾಯಿ ಶಕುಂತಲಾ ಜೊತೆ ವಿಜಯನಗರದ 2 ನೇ ಮುಖ್ಯ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಾಲಕ ಇಂದು ಬೆಳಗ್ಗೆ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಡೆತ್ ನೋಟ್ ಬರೆದಿಟ್ಟು ಶಾಲಾ ಸಮವಸ್ತ್ರದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪಾರಿವಾಳದ ಬೆಟ್ಟಿಂಗ್ ವಿಚಾರಕ್ಕೆ ಸ್ನೇಹಿತರ ಜೊತೆ ಗಲಾಟೆ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಾಗಿದ್ದು, ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹ ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಿದ್ದಾರೆ. ಇನ್ನೂ ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!