ಹಾಸನ: ಹೊಳೆನರಸೀಪುರದ ಬೆಟ್ಟದ ಮಾವಿನಕೆರೆ ರಂಗನಾಥಸ್ವಾಮಿ ದೇವಾಲಯಕ್ಕೆ ಆಗಮಿಸಿದ್ದ ಭವಾನಿ ರೇವಣ್ಣ ಅವರು ಪೂಜೆ ವೇಳೆ ಕಣ್ಣೀರಿಟ್ಟ ಘಟನೆ ನಡೆದಿದೆ.
ಎರಡನೇ ಶ್ರಾವಣ ಶನಿವಾರದ ಪ್ರಯುಕ್ತ ಭವಾನಿ ರೇವಣ್ಣ ಅವರು ಕುಟುಂಬಸ್ಥರೊಂದಿಗೆ ರಂಗನಾಥಸ್ವಾಮಿ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕುಟುಂಬ ಸದಸ್ಯರೊಂದಿಗೆ ರಂಗನಾಥಸ್ವಾಮಿಗೆ ಅಭಿಷೇಕ ನೆರವೇರಿಸಿ, ಸುಮಾರು ಒಂದು ಗಂಟೆ ಕಾಲ ಗರ್ಭಗುಡಿಯಲ್ಲಿ ಕುಳಿತು ಪೂಜೆ ಸಲ್ಲಿಸಿದರು. ಈ ವೇಳೆ ಅವರು ಭಾವುಕರಾಗಿ ಕಣ್ಣೀರಿಟ್ಟರು.
ಜೈಲಿನಲ್ಲಿರುವ ಪುತ್ರ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ನೆನೆದು ಭವಾನಿ ರೇವಣ್ಣ ಕಣ್ಣೀರಿಟ್ಟಿದ್ದಾರೆ ಎನ್ನಲಾಗಿದೆ. ಕಂಬನಿ ಒರೆಸಿಕೊಳ್ಳುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಪೂಜಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹಾಗೂ ಸೂರಜ್ ರೇವಣ್ಣ ಭಾಗಿಯಾಗಿದ್ದರು.



