ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

0
Spread the love

ನವದೆಹಲಿ: ಕಾಂಗ್ರೆಸ್ ಅಧಿನಾಯಕಿ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿ ಆಸ್ಪತ್ರೆ ದಾಖಲಾಗಿದ್ದಾರೆ. ದೆಹಲಿಯ ಗಂಗಾ ರಾಮ್ ಆಸ್ಪತ್ರೆ ದಾಖಲಾಗಿರುವ ಸೋನಿಯಾ ಗಾಂಧಿ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ಹೇಳಿವೆ.

Advertisement

78 ವರ್ಷದ ಸೋನಿಯಾ ಗಾಂಧಿ ಆರೋಗ್ಯ ಇಂದು ಕ್ಷೀಣಿಸಿತ್ತು. ಅನಾರೋಗ್ಯದ ಕಾರಣ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರ ಸಲಹೆಗಾರರು ಹಿರಿಯ ಕಾಂಗ್ರೆಸ್ ನಾಯಕಿ ಮತ್ತು ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಅಧಿಕ ರಕ್ತದೊತ್ತಡವಿತ್ತು ಎಂದು ಹೇಳಿದ್ದಾರೆ.

ಶಿಮ್ಲಾದ ಆಸ್ಪತ್ರೆಯಲ್ಲಿ ಅವರ ನಿಯಮಿತ ವೈದ್ಯಕೀಯ ತಪಾಸಣೆ ನಡೆಸಲಾಯಿತು. ಅಧಿಕ ರಕ್ತದೊತ್ತಡದ ಇದ್ದ ಕಾರಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸಿಎಂ ಸುಖು ಅವರ ಮಾಧ್ಯಮ ಸಲಹೆಗಾರ ನರೇಶ್ ಚೌಹಾಣ್ ಸುದ್ದಿ ಸಂಸ್ಥೆಗೆ ತಿಳಿಸಿದ್ದರು. ಇದು ಸಾಮಾನ್ಯ ತಪಾಸಣೆಯಾಗಿತ್ತು. ಇದಾದ ನಂತರ ಅವರು ತಮ್ಮ ಮನೆಗೆ ಮರಳಿದರು ಎಂದು ಮಾಹಿತಿ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here