• About
  • Advertise
  • Privacy & Policy
  • Contact
Saturday, November 7, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Politics News

ಕಾಂಗ್ರೆಸ್ʼಗೆ ಸೌಮ್ಯಾ ರೆಡ್ಡಿ ರಾಜೀನಾಮೆ! ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನವಿಲ್ಲದ್ದಕ್ಕೆ ಅಸಮಾಧಾನ

Vijaya Sakshi News Desk by Vijaya Sakshi News Desk
October 17, 2026
in Politics News
0
SHARES
12
VIEWS
Share on Facebook

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡಿಲ್ಲ ಎಂಬ ಅಸಮಾಧಾನದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿರುವ ಅವರು, ಮಹಿಳೆಯರಿಗೆ ಸಚಿವ ಸ್ಥಾನ ನೀಡದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶ ನೀಡಿಲ್ಲ ಎಂಬ ವಿಚಾರ ಕಾಂಗ್ರೆಸ್ ಪಕ್ಷದೊಳಗೆ ಈ ಹಿಂದಿನಿಂದಲೂ ಚರ್ಚೆಗೆ ಕಾರಣವಾಗಿತ್ತು. ಮಹಿಳಾ ನಾಯಕಿಯರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂಬ ಬೇಡಿಕೆ ಕೇಳಿಬಂದಿದ್ದರೂ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದೆ.

ಆಗಸ್ಟ್ 20ರಂದೇ ರಾಜೀನಾಮೆ ಪತ್ರ ಸಲ್ಲಿಸಿದ್ದ ಸೌಮ್ಯಾ ರೆಡ್ಡಿ!

ಸೌಮ್ಯಾ ರೆಡ್ಡಿ ಅವರು 2026ರ ಆಗಸ್ಟ್ 20ರಂದೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದರು ಎಂಬ ಮಾಹಿತಿ ಇದೀಗ ಹೊರಬಿದ್ದಿದೆ. ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ಸಿಗದಿರುವ ಬಗ್ಗೆ ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿರುವುದಾಗಿ ತಿಳಿದುಬಂದಿದೆ.

ಮಹಿಳೆಯರಿಗೆ ರಾಜಕೀಯವಾಗಿ ಹೆಚ್ಚಿನ ಅವಕಾಶ ನೀಡಬೇಕು. ಸಚಿವ ಸಂಪುಟದಲ್ಲಿಯೂ ಮಹಿಳಾ ನಾಯಕಿಯರಿಗೆ ಸ್ಥಾನ ಕಲ್ಪಿಸಬೇಕು ಎಂಬ ವಿಚಾರವನ್ನು ಅವರು ಹೈಕಮಾಂಡ್ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ.

ಮಹಿಳಾ ಸಚಿವರ ನೇಮಕಕ್ಕೆ ಹೈಕಮಾಂಡ್ ಭರವಸೆ?

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ನೀಡದಿರುವ ವಿಚಾರ ಈ ಹಿಂದೆ ಕಾಂಗ್ರೆಸ್ ಪಕ್ಷದೊಳಗೆ ಚರ್ಚೆಗೆ ಕಾರಣವಾಗಿತ್ತು. ಈ ಸಂದರ್ಭದಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಕೂಡ ಮಹಿಳಾ ಪ್ರಾತಿನಿಧ್ಯದ ಕೊರತೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದರು.

ಮಹಿಳೆಯರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಪಕ್ಷದ ಹೈಕಮಾಂಡ್ ಭರವಸೆ ನೀಡಿತ್ತು ಎನ್ನಲಾಗಿದೆ. ಆದರೆ, ಈವರೆಗೆ ಆ ಭರವಸೆ ಈಡೇರಿಲ್ಲ ಎಂಬ ಅಸಮಾಧಾನ ಸೌಮ್ಯಾ ರೆಡ್ಡಿ ಅವರ ರಾಜೀನಾಮೆಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಹೊಸ ಅಧ್ಯಕ್ಷರ ನೇಮಕದವರೆಗೆ ಹುದ್ದೆಯಲ್ಲಿ ಮುಂದುವರಿಕೆ

ರಾಜೀನಾಮೆ ಪತ್ರ ಸಲ್ಲಿಸಿದ್ದರೂ ಪಕ್ಷದ ಹಿತದೃಷ್ಟಿಯಿಂದ ಮಹಿಳಾ ಕಾಂಗ್ರೆಸ್ ಘಟಕಕ್ಕೆ ಹೊಸ ಅಧ್ಯಕ್ಷರನ್ನು ನೇಮಕ ಮಾಡುವವರೆಗೆ ತಾವೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವುದಾಗಿ ಸೌಮ್ಯಾ ರೆಡ್ಡಿ ತಿಳಿಸಿದ್ದಾರೆ ಎನ್ನಲಾಗಿದೆ.

ಹುದ್ದೆಯಿಂದ ನಿರ್ಗಮಿಸಿದರೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತೆಯಾಗಿ ಮುಂದುವರಿಯುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಪಕ್ಷದ ಸಂಘಟನೆ ಹಾಗೂ ಮಹಿಳೆಯರ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಕೆಲಸ ಮಾಡುವುದನ್ನು ಮುಂದುವರಿಸುವುದಾಗಿಯೂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.

2028, 2029ರ ಚುನಾವಣೆಗೂ ಪಕ್ಷದ ಪರ ಕೆಲಸ

ಮುಂಬರುವ 2028ರ ಕರ್ನಾಟಕ ವಿಧಾನಸಭಾ ಚುನಾವಣೆ ಹಾಗೂ 2029ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಸೌಮ್ಯಾ ರೆಡ್ಡಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

ಒಟ್ಟಿನಲ್ಲಿ, ಮಹಿಳೆಯರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡದಿರುವ ವಿಚಾರ ಇದೀಗ ಕಾಂಗ್ರೆಸ್ ಪಕ್ಷದೊಳಗೆ ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ. ಸೌಮ್ಯಾ ರೆಡ್ಡಿ ಅವರ ರಾಜೀನಾಮೆ ಪತ್ರದ ಕುರಿತು ಪಕ್ಷದ ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

Tags: BreakingNewsDK ShivakumarKarnatakaKarnataka cabinetKarnataka Mahila CongressMallikarjun khargeNewsHeadlinesSoumya ReddySoumya Reddy ResignationVijayasakshivijayasakshinewsWomen Ministers
ShareSendShare
Previous Post

ಸ್ಟಿಂಗ್ ಆಪರೇಷನ್ ವಿರುದ್ಧ HDK ಸಮರ: ಡಿಜಿ ಕಚೇರಿಗೆ ಮುತ್ತಿಗೆ ಯತ್ನ, ಪೊಲೀಸರೊಂದಿಗೆ ತಳ್ಳಾಟ-ನೂಕಾಟ!

Next Post

ದೆಹಲಿಯಲ್ಲಿ ‘ಲೆಹ್ರಾ ದೋ ತಿರಂಗಾ’ ಪ್ರತಿಭಟನೆ! ಪೊಲೀಸ್ ವಶದಲ್ಲಿದ್ದ ಅಭಿಜೀತ್ ದೀಪ್ಕೆ ಬಿಡುಗಡೆ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post

ದೆಹಲಿಯಲ್ಲಿ ‘ಲೆಹ್ರಾ ದೋ ತಿರಂಗಾ’ ಪ್ರತಿಭಟನೆ! ಪೊಲೀಸ್ ವಶದಲ್ಲಿದ್ದ ಅಭಿಜೀತ್ ದೀಪ್ಕೆ ಬಿಡುಗಡೆ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ವಿಪಕ್ಷಗಳ ಬಳಿ ದಾಖಲೆ ಇಲ್ಲ, ಅಬಕಾರಿ ಸಚಿವರ ರಾಜೀನಾಮೆಗೆ ಅವಶ್ಯಕತೆ ಇಲ್ಲ; ಶಾಸಕ ಹೆಚ್.ಸಿ. ಬಾಲಕೃಷ್ಣ

‘ಬಿಜೆಪಿಯಲ್ಲಿ ಸಿಎಂ ಆಗುವ ಗಂಡಸರು ಇಲ್ವಾ?’; ಹೆಚ್‌ಡಿಕೆ ವಿರುದ್ಧ ಬಾಲಕೃಷ್ಣ ವಾಗ್ದಾಳಿ

November 7, 2026
ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರದೋಷ್ ಬಳಿಕ ರವಿಶಂಕರ್, ವಿನಯ್ ಕೂಡ ಮಾಫಿ ಸಾಕ್ಷಿಗೆ ಮನವಿ

ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ; ನ್ಯಾಯಾಲಯದಿಂದ ಷರತ್ತುಬದ್ಧ ಅನುಮತಿ

November 7, 2026
ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ! ಹಣ, ಚಿನ್ನದ ಉಂಗುರಕ್ಕಾಗಿ ವೃದ್ಧೆಯ ಕೊಲೆ

ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ! ಹಣ, ಚಿನ್ನದ ಉಂಗುರಕ್ಕಾಗಿ ವೃದ್ಧೆಯ ಕೊಲೆ

November 7, 2026
ಜೇವರ್ಗಿಯಿಂದ ಯಾದಗಿರಿಗೆ ಬರುತ್ತಿದ್ದ ಕಾರು ಅಪಘಾತ; ನಾಲ್ವರು ಯುವಕರ ದಾರುಣ ಅಂತ್ಯ!

ಜೇವರ್ಗಿಯಿಂದ ಯಾದಗಿರಿಗೆ ಬರುತ್ತಿದ್ದ ಕಾರು ಅಪಘಾತ; ನಾಲ್ವರು ಯುವಕರ ದಾರುಣ ಅಂತ್ಯ!

November 7, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ವಿಪಕ್ಷಗಳ ಬಳಿ ದಾಖಲೆ ಇಲ್ಲ, ಅಬಕಾರಿ ಸಚಿವರ ರಾಜೀನಾಮೆಗೆ ಅವಶ್ಯಕತೆ ಇಲ್ಲ; ಶಾಸಕ ಹೆಚ್.ಸಿ. ಬಾಲಕೃಷ್ಣ

‘ಬಿಜೆಪಿಯಲ್ಲಿ ಸಿಎಂ ಆಗುವ ಗಂಡಸರು ಇಲ್ವಾ?’; ಹೆಚ್‌ಡಿಕೆ ವಿರುದ್ಧ ಬಾಲಕೃಷ್ಣ ವಾಗ್ದಾಳಿ

November 7, 2026
ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರದೋಷ್ ಬಳಿಕ ರವಿಶಂಕರ್, ವಿನಯ್ ಕೂಡ ಮಾಫಿ ಸಾಕ್ಷಿಗೆ ಮನವಿ

ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ; ನ್ಯಾಯಾಲಯದಿಂದ ಷರತ್ತುಬದ್ಧ ಅನುಮತಿ

November 7, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper