HomeKarnataka Newsಮಂಗಳೂರಿನಲ್ಲಿ ಕೋಮು ಸಂಘರ್ಷ ಕಡಿವಾಣಕ್ಕೆ ಬಂತು ಸ್ಪೆಷಲ್ ಆ್ಯಕ್ಷನ್ ಫೋರ್ಸ್: ಗೃಹ ಸಚಿವರಿಂದ ಚಾಲನೆ!

ಮಂಗಳೂರಿನಲ್ಲಿ ಕೋಮು ಸಂಘರ್ಷ ಕಡಿವಾಣಕ್ಕೆ ಬಂತು ಸ್ಪೆಷಲ್ ಆ್ಯಕ್ಷನ್ ಫೋರ್ಸ್: ಗೃಹ ಸಚಿವರಿಂದ ಚಾಲನೆ!

For Dai;y Updates Join Our whatsapp Group

ಮಂಗಳೂರು:- ಕೋಮು ಸಂಘರ್ಷ ಕಡಿವಾಣಕ್ಕೆ ಮಂಗಳೂರಿಗೆ ಸ್ಪೆಷಲ್ ಆ್ಯಕ್ಷನ್ ಫೋರ್ಸ್​​ ಅಸ್ತಿತ್ವಕ್ಕೆ ಬಂದಿದ್ದು, ಗೃಹ ಸಚಿವ ಡಾ.ಜಿ ಪರಮೇಶ್ವರ್​ ನೂತನ ಸ್ಟ್ರೈಕಿಂಗ್ ಫೋರ್ಸ್​​ಗೆ ಚಾಲನೆ ನೀಡಿದರು. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರು ಚಾಲನೆ ನೀಡಿದ್ದಾರೆ.

ಕೋಮುದಳ್ಳುರಿಗೆ ಸಿಲುಕಿದ್ದ ಮಂಗಳೂರಿಗೆ ನೂತನ ಪೊಲೀಸ್ ಪಡೆಯ ಆಗಮನವಾಗಿದೆ. ರಾಜ್ಯ ಸರ್ಕಾರ ಕೊನೆಗೂ ಕೊಟ್ಟ ಮಾತಿನಂತೆ ಕೋಮು ಸಂಘರ್ಷದ ನೆಲದಲ್ಲಿ ಹೊಸ ತಂಡವನ್ನು ಹುಟ್ಟುಹಾಕಿದೆ. ಕಿಡಿಗೇಡಿಗಳ ಹುಟ್ಟಡಗಲಿಸಿದೆ.

ಕೋಮು ಸಂಘರ್ಷ ನಿಗ್ರಹಕ್ಕೆ ಮಾಡಿರುವ ಸ್ಪೆಷಲ್ ಆಕ್ಷನ್ ಫೋರ್ಸ್‌ಗೆ ಈಗಾಗಲೇ ಗೃಹ ಸಚಿವ ಡಾ.ಜಿ ಪರಮೇಶ್ವರ್ ಚಾಲನೆ ನೀಡಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಈ ಫೋರ್ಸ್ ಕಾರ್ಯಾಚರಣೆ ಮಾಡಲಿದೆ. ಡಿಐಜಿ ದರ್ಜೆ ಅಧಿಕಾರಿ ನೇತೃತ್ವದಲ್ಲಿ ಈ ತಂಡ ಕಾರ್ಯ ನಿರ್ವಹಿಸಲಿದ್ದು, 248 ಸಿಬ್ಬಂದಿ ಒಳಗೊಂಡ ಮೂರು ಕಂಪನಿ ಕಾರ್ಯಾಚರಣೆಗೆ ಸಿದ್ಧವಾಗಿದೆ. ಪ್ರತಿ ಕಂಪನಿಯಲ್ಲಿ 80 ಸಿಬ್ಬಂದಿ ಇರಲಿದ್ದಾರೆ.

ಮಂಗಳೂರು ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಹೆಗಲಿಗೆ ಈ ವಿಶೇಷ ಕಾರ್ಯ ಪಡೆಯ ಹೆಚ್ಚುವರಿ ಹೊಣೆ ಇರಲಿದೆ. ಮಂಗಳೂರು ನಗರ ಕೇಂದ್ರದಲ್ಲಿಯೇ ಎಸ್ಎಎಫ್ ಕಾರ್ಯಪಡೆಯ ಕೇಂದ್ರ ಕಚೇರಿ ಇರಲಿದೆ. ನಕ್ಸಲ್ ನಿಗ್ರಹ ಪಡೆಯಲ್ಲಿದ್ದ 656 ಸಿಬ್ಬಂದಿಗಳ ಪೈಕಿ 248 ಮಂದಿ ಈ ಹೊಸ ಪಡೆಗೆ ನಿಯೋಜನೆ ಮಾಡಲಾಗಿದೆ.

ಡಿಐಜಿ, ಡಿವೈಎಸ್ಪಿ, ಸಹಾಯಕ ಕಮಾಂಡೆಂಟ್, 4 ಇನ್ ಸ್ಪೆಕ್ಟರ್, 16 ಪಿಎಸ್ಐ ಸೇರಿದಂತೆ ಒಟ್ಟು 248 ಸಿಬ್ಬಂದಿ ತಂಡದಲ್ಲಿದ್ದಾರೆ. ಈ ತಂಡ ಸಂಭಾವ್ಯ ಕೋಮು ಹಿಂಸಾಚಾರ, ಕೋಮು ಗಲಭೆಯ ಸಂಚು, ಮೂಲಭೂತವಾದಿ ಚಟುವಟಿಕೆ ನಿಗ್ರಹ ಸೇರಿದಂತೆ ಗುಪ್ತ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಲಿದೆ. ಆ ಮೂಲಕ ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ನಡೆಯುವ ಚಟುವಟುಕೆಗಳ ಮೇಲೂ SAF ತೀವ್ರ ನಿಗಾ ಇಡಲಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img