HomeKarnataka Newsಗುಡ್ ನ್ಯೂಸ್: ಆ.17ರಂದು ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು!

ಗುಡ್ ನ್ಯೂಸ್: ಆ.17ರಂದು ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು!

For Dai;y Updates Join Our whatsapp Group

Spread the love

ಬೆಂಗಳೂರು:- ಆ.17ರಂದು ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವೃಂದ ಸಂಘಗಳ ವತಿಯಿಂದ ಆ.17ರಂದು ನಗರದ ಅರಮನೆ ಆವರಣದಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಕಾರ್ಯಾಗಾರ ಆಯೋಜಿಸಲಾಗಿದೆ. ಹೀಗಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಕೂಲವಾಗಲೆಂದು ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ.

ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ. ಬಿ ಸುತ್ತೋಲೆ ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವೃಂದ ಸಂಘಗಳ ವತಿಯಿಂದ ಆ.17ರಂದು ಬೆಂಗಳೂರು ನಗರದ ಅರಮನೆ ಆವರಣದಲ್ಲಿ ಅಭಿನಂದನೆ ಹಾಗೂ ಕಾರ್ಯಾಗಾರ ಆಯೋಜಿಸಲಾಗಿದೆ.

. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ನೌಕರರು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ. ಬಿ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಸಮ್ಮೇಳನದಲ್ಲಿ ಭಾಗವಹಿಸಿದ ಬಗ್ಗೆ ಅಧಿಕೃತ ಹಾಜರಾತಿ ಪತ್ರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಅಥವಾ ಅವರಿಂದ ನಾಮನಿರ್ದೇಶನ ಹೊಂದಿದ ಅಧಿಕಾರಿಗಳಿಂದ ಪಡೆದು ಒದಗಿಸಬೇಕು. ಈ ಷರತ್ತಿಗೊಳಪಟ್ಟು ಬೆಂಗಳೂರು ನಗರ ಜಿಲ್ಲೆಯ ಹಾಗೂ ರಾಜ್ಯದ ಇತರೆ ಜಿಲ್ಲೆಗಳ ಅಧಿಕಾರಿ, ನೌಕರರಿಗೆ ಆ.17ರಂದು ಸಾರ್ವಜನಿಕ ಕೆಲಸ ಕಾರ್ಯಗಳಿಗೆ ತೊಂದರೆಯಾಗದಂತೆ ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!